ಬೀದರ|ಲೇಖಕರಿಂದ ಪುಸ್ತಕಗಳ ಆಹ್ವಾನ.!


ಬೀದರ.29.ಜನವರಿ.25:-2018-19ನೇ ಸಾಲಿನಿಂದ 2023-24ನೇ ಸಾಲಿನ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಲಲಿತಕಲೆ, ವಿಜ್ಞಾನ, ಮಾನವಿಕ, ವೈದ್ಯಕೀಯ, ತಾಂತ್ರಿಕ, ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಹಾಗೂ ಇತರೆ ಭಾರತೀಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಎರಡನೇ ಹಂತದಲ್ಲಿ ಪುಸ್ತಕಗಳನ್ನು ಆಹ್ವಾನಿಸಿದೆ ಎಂದು ಬೀದರ ಜಿಲ್ಲಾ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ(ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಶೀರ್ಷಿಕೆ, ಲೇಖಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಪುಟಗಳು, ಪುಸ್ತಕದ ಅಳತೆ, ಉಪಯೋಗಿಸಿರುವ ಕಾಗದ, ಗ್ರಂಥಸ್ವಾಮ್ಯ ವಿವರ, ಮುದ್ರಣ ವರ್ಷ, ಆವೃತ್ತಿ, ಬೆಲೆ, ಮುಖಪುಟ, ಪುಸ್ತಕದ ಒಳಪುಟ ವಿನ್ಯಾಸ, ರೇಖಾಚಿತ್ರಗಾರರ ಹೆಸರು ಮತ್ತು ಪ್ರಕಾಶಕರು ಹಾಗೂ ಮುದ್ರಕರ ವಿಳಾಸಗಳನ್ನು ಮುದ್ರಿಸಿರಬೇಕು. ಅರ್ಜಿ ಸಲ್ಲಿಸಲು ದಿನಾಂಕ: 01-03-2025 ಕೊನೆಯ ದಿನಾಂಕವಾಗಿರುತ್ತದೆ.


ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು: ಪುಸ್ತಕದ ಒಂದು ಪ್ರತಿ, ಕಾಪಿರೈಟನ ನೋಂದಣಿಯ ದೃಢೀಕರಿಸಿದ ನಕಲು ಪ್ರತಿ, ವಿತರಕರು ಸರಬರಾಜು ಹಕ್ಕನ್ನು ಪಡೆದಿದ್ದಲ್ಲಿ ಅದರ ನಕಲು ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸುವುದು. ಈ ದಾಖಲಾತಿಗಳು ಇಲ್ಲದಿದ್ದಲ್ಲಿ ಪುಸ್ತಕಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.


ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ಚಿತ್ತಖಾನ ಕಟ್ಟಡ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, ಪ್ರೌಢ ಶಾಲೆ ವಿಭಾಗ ಬೀದರ ಹಾಗೂ ಈ ಕಛೇರಿಯ ದೂರವಾಣಿ ಸಂ: 08482 226401 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

50 minutes ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

5 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

11 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

12 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

12 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

12 hours ago