ಬೀದರ|ಹುಟ್ಟುಹಬ್ಬಕೆ ಉಡುಗೊರೆ ಬದಲು ಹೆಲ್ಮೆಟ್, ಸೆಫ್ಟಿ ಹಾರ್ನೆಸ್ ಬೆಲ್ಟ್ ಉಡುಗೊರೆ ನೀಡಿ : ಮಹಮ್ಮದ ಜಾಫರ್ ಸಾದಿಕ.!

ಬೀದರ.14.ಫೆ.25:- ಇಂದು ಬೀದರ್ ನಗರದಲ್ಲಿ ಮೋಟ್ ಮೊದ್ಲು ಹೊಸ ಪದ್ದತಿಗೆ ಚಲನೆಗೆ ಮಹಮ್ಮದ ಜಾಫರ್ ಸಾದಿಕ ಸಲಹೆ ನೀಡಿದ್ದಾರೆ.

ಸಹೋದರಿಯರು ತನ್ನ ಅಣ್ಣ ತಮ್ಮಂದಿರಿಗೆ ರಕ್ಷಾ ಬಂಧನ, ಹುಟ್ಟುಹಬ್ಬದ ದಿನದಂದು ದುಬಾರಿ ಬೆಲೆಯ ಉಡುಗೊರೆ ನೀಡುವ ಬದಲು ಹೆಲ್ಮೆಟ್ ಹಾಗೂ ಸೆಫ್ಟಿ ಹಾರ್ನೆಸ್ ಬೆಲ್ಟ್ ಉಡುಗೊರೆಯಾಗಿ ನೀಡಿ ಎಂದು ಹಿರಿಯ ಮೋಟಾರು ವಾಹನ ನಿರೀಕ್ಷಕ ಮಹಮ್ಮದ್ ಜಾಫರ್ ಸಾದಿಕ್ ಮನವಿ ಮಾಡಿದರು.

ಇಂದು ಕರಡ್ಯಾಳ ಗ್ರಾಮದ ಗುರುಕುಲದಲ್ಲಿನ ಅನುಭವ ಮಂಟಪದಲ್ಲಿ ಭಾಲ್ಕಿಯ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಲೈಟ್ ಹಾಗೂ ದ್ವಿಚಕ್ರ ವಾಹನದ ಮೇಲೆ 4 ವರ್ಷದೊಳಗಿನ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಧರಿಸಬೇಕು.

ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿದ ನಿಯಮಗಳ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ನಿಯಮಗಳ ಬಗ್ಗೆ ವಿವರಿಸಿದರು.

4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ದ್ವಿಚಕ್ರ ವಾಹನದ ಮೇಲೆ ಕರೆದುಕೊಂಡು ಹೋಗುವಾಗ ಸೆಫ್ಟಿ ಹಾರ್ನೆಸ್ ಬೆಲ್ಟ್ ಧರಿಸಬೇಕು. 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕರೆದೊಯ್ಯುವಾಗ ಗಂಟೆಗೆ 40 ಕಿ.ಮೀ. ವೇಗ ಮೀರತಕ್ಕದಲ್ಲ.

5 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ಮಕ್ಕಳಿಗೆ ದ್ವಿಚಕ್ರ ವಾಹನದ ಮೇಲೆ ಕರೆದುಕೊಂಡು ಹೋಗುವಾಗ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಿದರು.

ಪ್ರತಿವರ್ಷ ಹೆಚ್ಚಾಗುತ್ತಿರುವ ಅಪಘಾತಗಳು ಕಡಿಮೆಯಾಗಿಸಲು ತಾಂತ್ರಿಕವಾಗಿ ವಿವರಿಸಿದ ಅವರು, ಎಮ್-ಪರಿವಾಹನ ಮತ್ತು ಪರಿವಾಹನ ಸೇವೆ ತಂತ್ರಾಂಶದಲ್ಲಿನ ಆನ್ ಲೈನ್ ಸೇವೆಗಳ ಬಗ್ಗೆ ತಿಳಿಸಿ, ಎಲ್ಲರೂ ರಸ್ತೆ ನಿಯಮ ಹಾಗೂ ರಸ್ತೆ ಬದಿಯಿರುವ ಸಂಕೇತಗಳನ್ನು ನೋಡಿ ಸುರಕ್ಷತೆಯಿಂದ ವಾಹನ ಚಲಾಯಿಸಬೇಕು ಎಂದು ಎಚ್ಚರಿಕೆ ನೀಡಿದರು.

ಗುರುಕುಲದ ಪಿಯುಸಿಯ ಆಯ್ದ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತೆ ಬಗ್ಗೆ ಭಾಷಣ ಸ್ಪರ್ಧೆ ಹಮ್ಮಿಕೊಂಡಿದ್ದು, ಅತ್ಯುತ್ತಮ ಭಾಷಣ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಶಸ್ತಿ ಪತ್ರ, ರಸ್ತೆ ಸುರಕ್ಷತೆ ಟೀ ಶರ್ಟ್ ಹಾಗೂ ಕ್ಯಾಲೆಂಡರ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಭಾಲ್ಕಿ ಗ್ರಾಮಿಣ ವೃತ್ತದ ಸಿಪಿಐ ಜಿ ಎಸ್ ಬಿರಾದಾರ್, ಮೋಟಾರ್ ವಾಹನ ನಿರೀಕ್ಷಕ ವಿಯಕುಮಾರ್ ಉಮರಗೆ, ಉಪ ಪ್ರಾಂಶುಪಾಲ ಸಿದ್ರಾಮ್ ಘೋಗ್ಯಾ ಹಾಗೂ ರಮೇಶ ಪಟ್ಟೆ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇಂದು

prajaprabhat

Recent Posts

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

5 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

5 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

6 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

11 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

11 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

13 hours ago