ಬೀದರಿನಲ್ಲಿ ಇಪಿಎಸ್-೯೫ ಪಿಂಚಣಿದಾರರಿoದ ಪ್ರತಿಭಟನೆ


     ಬೀದರ.26.ಮಾರ್ಚ್25:–ಕಳೆದ ಒಂಭತ್ತು ವರ್ಷಗಳಿಂದ ೭೮ ಲಕ್ಷ ಇಪಿಎಸ್-೯೫ಪಿಂಚಣಿದಾರು ತಮ್ಮ ನ್ಯಾಯೋಚಿತ ಬೇಡಿಕೆಗಳಿಗಾಗಿ ನಿರಂತರವಾಗಿ ಹೋರಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಸಹ ಎರಡು ವರ್ಷಗಳ ಹಿಂದೆ ನೈಜ ವೇತನದ ಮೇರೆಗೆ ಹೆಚ್ಚಿನ ಪಿಂಚಣಿ ನೀಡಲು ಆದೇಶ ನೀಡಿದ್ದರೂ ಸಹ ಎಲ್ಲ ಪಿಂಚಣಿದಾರರು ಏಕೀಕೃತ ಪಿಂಚಣಿ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾಹೆಯಾನ ಕನಿಷ್ಠ ಪಿಂಚಣಿ ೭೫೦೦ ರೂ., ತುಟ್ಟಭತ್ಯೆ ಘೋಷಣೆಯಲ್ಲಿ ಹಾಗೂ ಪಿಂಚಣಿದಾರರಿಗೆ ಉಚಿತ ವೈದ್ಯಕೀಯ ಸೌಲಭ್ಯದಲ್ಲಿ ವಿಳಂಬ ಮತ್ತು ಹೆಚ್ಚಿನ ಪಿಂಚಣಿ ಮಂಜೂರಾತಿಯಲ್ಲಿ ಇಪಿಎಫ್‌ಓ ತೋರುತ್ತಿರುವ ವಿಳಂಬ ನೀತಿ ಮತ್ತು ನಿಷ್ಕಿçÃಯತೆಯನ್ನು ವಿರೋಧಿಸಿ ೨೦೨೫ರ ಮಾರ್ಚ್ ೨೪ ಮತ್ತು ೨೫ರಂದು ದೇಶಾದ್ಯಂತ ಎಲ್ಲ ಇಪಿಎಫ್‌ಓ ಕಚೇರಿಗಳ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸಲಾಗಿದೆ.

ಅದೇರೀತಿ ಬೀದರಿನಲ್ಲಿ ಮಾರ್ಚ್ ೨೫ರಂದು ಮಂಗಳವಾರ ಇಪಿಎಸ್-೯೫ ನ್ಯಾಕ್ ವತಿಯಿಂದ ಪ್ರತಿಭಟನೆ ನಡೆಸಿ ಪ್ರಾವಿಡೆಂಟ್ ಫಂಡ್ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಯಿತು. ತಮ್ಮ ಬೇಡಿಕೆಗಳಿಗೆ ಶೀಘ್ರ ಪರಿಹಾರ ಸಿಗದಿದ್ದರೆ ದೆಹಲಿ ಸೇರಿದಂತೆ ದೇಶಾದ್ಯಂತ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಇಪಿಎಸ್-೯೫ ಪಿಂಚಣಿದಾರರು ಎಚ್ಚರಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಇಪಿಎಸ್ ಪಿಂಚಣಿದಾರರ ಘಟಕದ ಉಪಾಧ್ಯಕ್ಷ ಶಿವಕುಮಾರ ಶೆಟಕಾರ್, ಕಾನೂನು ಸಲಹೆಗಾರ ನರಸಪ್ಪ, ಸಂಯೋಜಕ ಸುರೇಶ ಬಾಬು, ಬಸಯ್ಯ ಸ್ವಾಮಿ, ಸತ್ಯಕುಮಾರ ಮತ್ತಿತರ ಸದಸ್ಯರು ಸೇರಿದಂತೆ ಸುಮಾರು ೬೦ ಸದಸ್ಯರು ಪಾಲ್ಗೊಂಡಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

5 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

6 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

6 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

7 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

8 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

9 hours ago