ಬೀದರ.18.ಜುಲೈ.25:- ಇತ್ತೀಚಿಗೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಡಾ.ಈಶ್ವರ್ ಉಳ್ಳಾಗಡ್ಡಿ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೋರಡಿಸಿದೆ.
ಜೂ.27ರಂದು ಬೀದರ್ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಡಾ.ಈಶ್ವರ್ ಉಳ್ಳಾಗಡ್ಡಿ ಅವರು ಅಧಿಕಾರ ಸ್ವೀಕರಿಸಿದ್ದರು. ಇದೀಗ ಅವರನ್ನು ಧಾರವಾಡ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರನ್ನಾಗಿ ನೇಮಿಸಿ, ಸರಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಎಚ್ ಅವರು ಆದೇಶ ಹೋರಡಿಸಿದ್ದಾರೆ.
