ಬೀದರ್ | ಗಡಿ ಭಾಗದ ಸರಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಮೀಸಲಾತಿ ಅವಶ್ಯಕತೆ ಇದೆ : ನರಸಪ್ಪಾ ಜಾನಕೆ

ಬೀದರ.30.ಜನವರಿ.25:- ಬೀದರ್ ಗಡಿ ಭಾಗದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಹುದ್ದೆಗಳಿಗಾಗಿ ಮೀಸಲಾತಿಯ ಅವಶ್ಯಕತೆ ಇದೆ ಎಂದು ನರಸಪ್ಪಾ ಜಾನಕೆ ಅಭಿಪ್ರಾಯಪಟ್ಟರು.

ಇಂದು ಯಾಕತಪೂರ ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಶ ಏಜುಕೇಷನ್ ಚಾರಿಟೇಬಲ್ ಟ್ರಸ್ಟ್ ಹಮ್ಮಿಕೊಂಡಿರುವ, ʼಗಡಿ ಭಾಗದಲ್ಲಿ ಕನ್ನಡ ಭಾಷೆ ಜಾಗೃತಿ ಸಾಹಿತ್ಯ ಮತ್ತು ಸಂಸ್ಕೃತಿಕ ಕಾರ್ಯಕ್ರಮʼವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಜಿಲ್ಲೆ ಬಹು ರಾಜ್ಯ ಗಡಿಗಳಿಂದ ಕೂಡಿದೆ. ಇಲ್ಲಿನ ಜನರು ಪಂಚ ಭಾಷೆಗಳನ್ನು ಮಾತನಾಡುತ್ತಾರೆ. ಕನ್ನಡ ಈ ನೆಲದ ಭಾಷೆಯಾಗಿ ಇಲ್ಲಿನ ಜನ ಅಭಿಮಾನ, ಸ್ವಾಭಿಮಾನದಿಂದ ಭಾಷಾ ಪ್ರೇಮವನ್ನು ಬೆಳೆಸುತ್ತಿದ್ದಾರೆ ಎಂದರು.

ಡಾ.ಸುಬ್ಬಣ್ಣ ಕರಕನಳ್ಳಿ ಅವರು ಮಾತನಾಡಿ, ಪ್ರಗತಿಗೆ ಶಿಕ್ಷಣವೇ ಮೂಲ, ನಮ್ಮ ಎಲ್ಲಾ ಸಮಸ್ಯೆಗಳನ್ನು ಹೊಗಲಾಡಿಸುವ ಶಕ್ತಿ ಶಿಕ್ಷಣಕ್ಕೆ ಇದೆ.

ಕನ್ನಡ ಭಾಷೆ ಶಿಕ್ಷಣ ಅನ್ನದ, ಚಿನ್ನದ ಭಾಷೆಯಾಗಿದೆ. ಇದು ಏಕತೆ, ಭಾವೈಕ್ಯತೆಯ ಭಾಷೆಯಾಗಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ ಶಾಲೆಯ ಮುಖ್ಯಗುರು ಜಾವೀದ್ ಅಹಮ್ಮದ್ ಮಾತನಾಡಿ, ಕನ್ನಡ ಭಾಷೆ ಪ್ರತಿದಿನ ವ್ಯವಹಾರಿಕ ಭಾಷೆಯಾಗಬೇಕು. ಗಡಿ ಭಾಗದ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ದಾನಿಶ ಎಜುಕೇಷನ್ ಚಾರಿಟೇಬಲ್ ಟ್ರಸ್ಟನ ಅಧ್ಯಕ್ಷ ಗೌಸೋದ್ದೀನ್ ಕುಪೇಂದ್ರ ಹೊಸಮನಿ, ಗ್ರಾಮ ಪಂಚಾಯತ್ ಸದಸ್ಯೆ ರತ್ನಮ್ಮಾ ಗಣಾಪೂರ, ಸಂಜೀವಕುಮಾರ್ ದಳಪತಿ, ಸೈಯದ್ ಮುದ್ದೆ, ವಿನಾಯಕ್ ಚವ್ಹಾಣ್, ಕಮಲಾಕರ್, ಅರ್ಚನಾ, ಬಸವಶ್ರೀ, ತಾವರ ಬೇಗಂ ಹಾಗೂ ಕಾಸೀಬ್ ಮುಸ್ತಾಕಿನ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ ಗಡಿ ಭಾಗದ ಎಲ್ಲಾ ಸರಕಾರಿ ಶಾಲೆ ಕಾಲೇಜುಗಳಿಲ್ಲಿ ಕಲಿತ್ ವಿದ್ಯಾರ್ಥಿಗಳಿಗೆ ವಿಶೇಷವಾದ ಅವಕಾಶ ಕಲ್ಪಿಸಿದರೆ ವಿದ್ಯಾರ್ಥಿ ಜೀವನದಲ್ಲಿ

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

2 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

2 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

2 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

2 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

2 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

3 hours ago