26 ಡಿ.24: ಬೀದರ ಜಿಲ್ಲೆಯ ಬೀದರ, ಔರಾದ, ಕಮಲನಗರ, ಭಾಲ್ಕಿ, ಬಸವಕಲ್ಯಾಣ, ಹುಲಸೂರ, ಚಿಟಗುಪ್ಪಾ)07 ತಾಲ್ಲೂಕು ತಹಸೀಲ್ದಾರರ ಕಛೇರಿಗಳಿಗೆ ಪ್ರತಿ ತಾಲ್ಲೂಕಿಗೆ 06 ಜನ ಕಂಪ್ಯೂಟರ್ ಆಪರೇಟರನ್ನು ಅಭಿಲೇಖಾಲಯಗಳಲ್ಲಿನ ದಾಖಲಾತಿಗಳ ಗಣಕೀಕರಣ ಮಾಡಲು ಒಟ್ಟು 42 ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುದ್ದೆಗಳ ವಿವರ: 42 ಕಂಪ್ಯೂಟರ್ ಆಪರೇಟರ್‍ಗಳು, ಪಿಯುಸಿ (60%) ಮತ್ತು ಆರು ತಿಂಗಳು ಅಥವಾ 1 ವರ್ಷದ ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಮತ್ತು ಕಂಪ್ಯೂಟರನಲ್ಲಿ ಎರಡು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಇಚ್ಛೆಯುಳ್ಳ 18 ರಿಂದ 40 ವರ್ಷ ವಯೋಮಿತಿಯ ಅರ್ಹ ಅಭ್ಯರ್ಥಿಗಳು 50 ರೂ. ಶುಲ್ಕ ಪಾವತಿಸಿ ಖುದ್ದಾಗಿ ಈ ಕಛೇರಿಯಿಂದ ನಿಗದಿತ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅರ್ಜಿಯ ಜೊತೆಗೆ ಕೇಳಲಾದ ದಾಖಲಾತಿಗಳನ್ನು ಸ್ವಯಂ ದೃಢೀಕರಣದೊಂದಿಗೆ ದಿನಾಂಕ: 04-01-2025 ರೊಳಗೆ ಖುದ್ದಾಗಿ ಕಛೇರಿಯ ಸಮಯದಲ್ಲಿ ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ (ನಿ) ಜಿಲ್ಲಾಧಿಕಾರಿಗಳ ಕಛೇರಿ, ಬೀದರದಲ್ಲಿ ಸಲ್ಲಿಸತಕ್ಕದ್ದು.
ಅಭ್ಯರ್ಥಿಯು ನಿಗದಿಪಡಿಸಿರುವ ವಿದ್ಯಾರ್ಹತೆಯಲ್ಲಿ 60% ಮೇಲ್ಪಟ್ಟು ಅಂಕ ಪಡೆದವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಯು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಹಾಗೂ ಅನುಭವ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ಧೇಶ ಸಹಕಾರ ಸಂಘ (ನಿ) ಜಿಲ್ಲಾಧಿಕಾರಿಗಳ ಕಛೇರಿ ಬೀದರಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Source.www.prajaprabhat.com
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…
View Comments
Bhagyashree. M
Diploma complete
System work
Computer work
Diploma complete 64%
One year work in jsw apprenticeship