ಬೀದರ್ : 02.ಫೆ..25:- ಬೀದರ್ ನಗರದಲ್ಲಿ ರಮಾಬಾಯಿ ಅಂಬೇಡ್ಕರ್ ಅವರ 127ನೇ ಜಯಂತಿ ಆಚರಣೆ ಮಾಡಲಾಗುವುದು ಎಂದು ಅನುದಾನಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರಾಥಮಿಕ ಶಾಲಾ ಶಿಕ್ಷಕರ ನೌಕರ ಸಂಘದ ಜಿಲ್ಲಾಧ್ಯಕ್ಷ ಗೋವಿಂದ್ ಪೂಜಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಯಂತಿ ಕಾರ್ಯಕ್ರಮವು ಅನುದಾನಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾಥಮಿಕ ಶಾಲಾ ಶಿಕ್ಷಕರ ನೌಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ 60 ಜನರಿಗೆ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಸೇವಾ ರತ್ನ ಪ್ರಶಸ್ತಿ ಹಾಗೂ 22 ಜನರಿಗೆ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಆದರ್ಶ ದಂಪತಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮೈಸೂರು ಉರಿಲಿಂಗಪೆದ್ದಿ ಮಠದ ಡಾ.ಜ್ಞಾನಪ್ರಕಾಶ್ ಸ್ವಾಮಿಜಿ ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಆಣದೂರಿನ ಭಿಕ್ಕುಣಿ ಅರ್ಚಸ್ಮೀತ ಅವರು ದಿವ್ಯ ಸಾನಿಧ್ಯ ವಹಿಸಲಿದ್ದು, ಕವಿತಾ ಶಿವಶರಣಪ್ಪ ಹುಗ್ಗಿ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ನಿಭಾಯಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಜುಂಬೆ ಬಾಲು ತಂಡದಿಂದ ಸಂಗೀತ ಕಾರ್ಯಕ್ರಮ, ಬೀದರ್ ನ ನಾಟ್ಯಶ್ರೀ ನೃತ್ಯಾಲಯದ ಮಕ್ಕಳಿಂದ ನೃತ್ಯ ಪ್ರದರ್ಶನ ಹಾಗೂ ಸಂಘಪ್ರಿಯಾ ಡಿ ಜ್ಯೋತಿ ಅವರಿಂದ ಧಮ್ಮ ವಂದನೆ ನಡೆಯಲಿದೆ ಎಂದಿದ್ದಾರೆ.
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…