ಬೀದರ.13.ಫೆ.25:- ಇಂದು ನಗರದ ಶಾಂತಿ ಕಿರಣ ಚಾರಿಟೇಬಲ್ ಮತ್ತು ಏಜುಕೆಶನಲ್ ಸಂಸ್ಥೆಯ ಶ್ರೀ ಸ್ವಾಮಿ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರೇಮಸಾಗರ್ ದಾಂಡೆಕರ್ ಅಭಿಪ್ರಾಯಪಟ್ಟರು.
ಇಂದಿನ ಆಧುನಿಕ ಯುಗದಲ್ಲಿ ಪ್ರಯತ್ನಶೀಲರಾಗಿ ತಮ್ಮ ಗುರಿ ತಲುಪಬೇಕು. ಶಿಸ್ತು, ಸಮಯ ಪ್ರಜ್ಞೆ, ಗುರು ಹಿರಿಯರಲ್ಲಿ ಗೌರವ ಮನೋಭಾವದಿಂದ ಇದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ.
ಗುರುಗಳ ಸೂಕ್ತ ಮಾರ್ಗದರ್ಶನ ಪಡೆದಾಗ ಪ್ರತಿಫಲ ದೊರೆಯುತ್ತದೆ. ವಿದ್ಯಾರ್ಥಿಗಳು ನಿಷ್ಠೆ ಹಾಗೂ ಶ್ರದ್ಧೆಯಿಂದ ಅಭ್ಯಾಸದ ಕಡೆಗೆ ಗಮನ ಹರಿಸಬೇಕು ಎಂದು ತಿಳಿಸಿದರು.
ಡಾ.ಚಂದ್ರಕಾಂತ್ ಪಾಟಿಲ್ ಅವರು ಮಾತನಾಡಿ, ಉತ್ತಮ ಸಮಾಜವನ್ನು ನಿರ್ಮಾಣ ಮಾಡುವುದರ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣವು ಮಹತ್ತರವಾದ ಪಾತ್ರ ವಹಿಸುತ್ತದೆ.
ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಕೌಶಲ್ಯ ಬೆಳೆಸಿಕೊಂಡಾಗ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ.
ಶಿಕ್ಷಣವು ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನದ ಜೊತೆಗೆ ಸಾಮಾಜಿಕ ಅರಿವು ಕೂಡ ಬೆಳೆಸಿಕೊಡುವಂತದ್ದಾಗಿದೆ ಎಂದು ಹೇಳಿ ವಿದ್ಯಾರ್ಥಿಗಳ ಭವಿಷ್ಯದ ಜೀವನ ಉಜ್ವಲವಾಗಲೆಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ಗಣೇಶಾನಂದ್ ಮಾಹಾರಾಜ್, ಕಾಲೇಜೀನ ನಿರ್ದೆಶಕಿ ಕಲ್ಪನಾ ಪಿ.ಮಠಪತಿ, ಪ್ರಾಚಾರ್ಯ ಮಂಗಲ ಎಮ್., ಉಪನ್ಯಾಸಕರಾದ ಪರಶುರಾಮ್ ಶಿಂಧೆ, ಆನಂದ್, ಸಂದೀಪ್, ಪೂಜಾ, ಜ್ಯೊತಿ, ಅಂಬಿಕಾ ಹೆಚ್, ಅಂಬಿಕಾ ಆರ್, ಲತಾ, ಮೇನಕ, ನಿತಾ, ಶಶಿಕಾಂತ್, ಅನೀಲ್, ಶಿವಕುಮಾರ್ ಬಾವಿಕಟ್ಟೆ ಹಾಗೂ ಎನ್.ಬಿ.ಮಹೇಶ್ ಸೇರಿದಂತೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…
ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…
ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…