ಬೀದರ.16.ಏಪ್ರಿಲ್.25:-ಬೀದರ್ ನಗರಸಭೆಯೊಂದಿಗೆ 6 ಗ್ರಾಮ ಪಂಚಾಯ್ತಿಗಳ 16 ಗ್ರಾಮಗಳನ್ನು ಸೇರಿಸಿ ದೊಡ್ಡ ನಗರ ಪ್ರದೇಶ ಎಂದು ಘೋಷಿಸಲು ಮತ್ತು ಬೀದರ್ ಮಹಾನಗರ ಪಾಲಿಕೆ ಪ್ರದೇಶ ಎಂದು ನಿರ್ದಿಷ್ಟಪಡಿಸಲು ಗೆಜೆಟ್ ಅಧಿಸೂಚನೆ ಹೊರಡಿಸಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ನಾಳೆ ಮುಖ್ಯಮಂತ್ರಿಗಳು ಬೀದರ್ಗೆ ಭೇಟಿ ನೀಡುತ್ತಿದ್ದು, 2025 ಕೋಟಿ ರೂ. ಮೌಲ್ಯದ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಿದ್ದಾರೆ. ಈಗ ಈ ಗೆಜೆಟ್ ಅಧಿಸೂಚನೆ ಹೊರಬಿದ್ದಿದ್ದು, ಇದು ಬೀದರ್ ಪಾಲಿಗೆ ಐತಿಹಾಸಿಕ ಕ್ಷಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಬೀದರ್ ಮಹಾನಗರ ಪಾಲಿಕೆ ಆಗುವುದರಿಂದ ನಗರದ ಅಭಿವೃದ್ಧಿ ವೇಗ ಪಡೆಯಲಿದೆ ಮತ್ತು ಬೀದರ್ ಜಿಲ್ಲೆಯ ಸರ್ವಾಂಗೀಣ ಪ್ರಗತಿಗೆ ಅನುಕೂಲವಾಗುತ್ತದೆ ಎಂದು ಇಬ್ಬರೂ ಸಚಿವರು ತಿಳಿಸಿದ್ದಾರೆ.
ಸಂಸತ್ ಸದಸ್ಯರ ಹರ್ಷ: ಬೀದರ್ ನಗರಸಭೆಯನ್ನು ಮಹಾನಗರಪಾಲಿಕೆಯಾಗಿ ಉನ್ನತೀಕರಿಸುವ ನಿರ್ಧಾರ ಮಾಡಿ ಪ್ರಸ್ತಾವನೆಯ ಗೆಜೆಟ್ ಅಧಿಸೂಚನೆ ಹೊರಡಿಸಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಸಂಸತ್ ಸದಸ್ಯ ಸಾಗರ್ ಈಶ್ವರ ಖಂಡ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಗರಾಭಿವೃದ್ಧಿ ಸಚಿವರು ಹಾಗೂ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಇದೇ ಸಂದರ್ಭದಲ್ಲಿ ಬೀದರ್ ನಗರದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…