ಔರಾದ.21.ಮೇ.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಔರಾದ್ ತಾಲ್ಲೂಕಿನ ಜಮಲಾಪುರ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ.
ಔರಾದ್ ಘಟಕಕ್ಕೆ ಸೇರಿದ KA 38, F0882 ಬಸ್ ಔರಾದ್‌ದಿಂದ ಭಾಲ್ಕಿಗೆ ತೆರಳುತ್ತಿದ್ದ ವೇಳೆ ಕಮಲನಗರ ರಸ್ತೆಯಲ್ಲಿ ಈ ಘಟನೆ ಜರುಗಿದೆ. ಎದುರಿನಿಂದ ಟೆಂಪೋ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಬಸ್ ಉರುಳಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಖಂಡೇಕೆರಿ ಗ್ರಾಮದ ಹಿರಿಯರಾದ ಸೋಪನರಾವ್ ಬಿರಾದಾರ ಹಾಗೂ ವಿದ್ಯಾರ್ಥಿ ನರಸಿಂಗ್ ಬಿರಾದಾರ ಗಾಯಗೊಂಡಿದ್ದು, ಅವರನ್ನು ಔರಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಸ್‌ನಲ್ಲಿ 9 ಜನ ಪ್ರಯಾಣಿಸುತ್ತಿದ್ದರು. ಇಬ್ಬರಿಗೆ ಗಾಯವಾಗಿದೆ. ಉಳಿದವರು ಎಲ್ಲರೂ ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಔರಾದ್ ಬಸ್ ಘಟಕ ವ್ಯವಸ್ಥಾಪಕ ರಾಜೇಂದ್ರ ‘ಈದಿನ.ಕಾಮ್ ಗೆ ಮಾಹಿತಿ ನೀಡಿದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…