10/06/2025 12:44 AM

Translate Language

Home » ಲೈವ್ ನ್ಯೂಸ್ » ಬೀದರ್‌ | ಹಕ್ಕಿಜ್ವರ: ಮನೆ ಮನೆ ಸಮೀಕ್ಷೆಗೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ,

ಬೀದರ್‌ | ಹಕ್ಕಿಜ್ವರ: ಮನೆ ಮನೆ ಸಮೀಕ್ಷೆಗೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ,

Facebook
X
WhatsApp
Telegram

ಬೀದರ.03.ಮಾರ್ಚ.25:- ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯ  ಮಹಾರಾಷ್ಟ್ರದ ಗಡಿಭಾಗಗಳಲ್ಲಿ 9 ಚೆಕ್‌ಪೋಸ್ಟ್‌ ತೆರೆಯಲಾಗಿದೆ. ತೆಲಂಗಾಣದ ಗಡಿಯಲ್ಲಿ 4 ಚೆಕ್‌ಪೋಸ್ಟ್‌ ಆರಂಭಿಸಲಾಗಿದೆ ಎಂದು ಹೇಳಿದರು.

ನೆರೆಯ ರಾಜ್ಯ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದ ಹಕ್ಕಿಜ್ವರ ದೃಢಪಟ್ಟಿರುವುದರಿಂದ ಗಡಿ ಭಾಗದ ಕೋಳಿ ಫಾರ್ಮ್‌ಗಳ ಸುತ್ತಮುತ್ತಲಿನ ಮನೆ ಮನೆಗಳಲ್ಲಿ ಸಮೀಕ್ಷೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.

ಬೀದರ್‌ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣಗಳು ಕಂಡುಬಂದಿಲ್ಲ. ಕೋಳಿ ಫಾರ್ಮ್‌ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ಪಾಲಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಎಲ್ಲಾದರೂ ಹಠಾತ್ ಆಗಿ ಕೋಳಿಗಳು ಸಾವನ್ನಪ್ಪಿದರೆ ಗಮನಕ್ಕೆ ತರಲು ತಿಳಿಸಲಾಗಿದೆ.

ಮಹಾರಾಷ್ಟ್ರದಿಂದ ಕೋಳಿ ಹಾಗೂ ಮೊಟ್ಟೆ ಸಾಗಾಟವಾಗದಂತೆ ಚೆಕ್‌ಪೋಸ್ಟ್‌ಗಳಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದರು.

‌ಜಿಲ್ಲೆಯಲ್ಲಿ ಮಾಂಸಾಹಾರ ಪ್ರಿಯರು ಮಾಂಸ ಹಾಗೂ ಮೊಟ್ಟೆಗಳನ್ನು ಹೆಚ್ಚು ಬೇಯಿಸಿ ತಿನ್ನಬೇಕು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಆದರೆ, ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಐದು ಲಕ್ಷದವರೆಗೆ ಉಚಿತ ಚಿಕಿತ್ಸೆ ನಿಯಮವಿದ್ದರೂ ಕೆಲ ಆಸ್ಪತ್ರೆಗಳು ರೋಗಿಗಳಿಂದ ಹಣ ಪಡೆಯುತ್ತಿರುವ ಪ್ರಕರಣಗಳ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ ಅವರು ಜಿಲ್ಲಾಧಿಕಾರಿ ಗಮನಕ್ಕೆ ತಂದರು.

ಹಣ ಪಡೆದ ಆಸ್ಪತ್ರೆಗಳು ಹಣವನ್ನು ಮರಳಿ ರೋಗಿಗಳಿಗೆ ಸಂದಾಯ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳು, ಪಶು ಪಾಲನಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!