ಬೀದರ.03.ಮಾರ್ಚ.25:- ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯ ಮಹಾರಾಷ್ಟ್ರದ ಗಡಿಭಾಗಗಳಲ್ಲಿ 9 ಚೆಕ್‌ಪೋಸ್ಟ್ ತೆರೆಯಲಾಗಿದೆ. ತೆಲಂಗಾಣದ ಗಡಿಯಲ್ಲಿ 4 ಚೆಕ್‌ಪೋಸ್ಟ್ ಆರಂಭಿಸಲಾಗಿದೆ ಎಂದು ಹೇಳಿದರು.
ನೆರೆಯ ರಾಜ್ಯ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದ ಹಕ್ಕಿಜ್ವರ ದೃಢಪಟ್ಟಿರುವುದರಿಂದ ಗಡಿ ಭಾಗದ ಕೋಳಿ ಫಾರ್ಮ್‌ಗಳ ಸುತ್ತಮುತ್ತಲಿನ ಮನೆ ಮನೆಗಳಲ್ಲಿ ಸಮೀಕ್ಷೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ಬೀದರ್ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣಗಳು ಕಂಡುಬಂದಿಲ್ಲ. ಕೋಳಿ ಫಾರ್ಮ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ಪಾಲಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಎಲ್ಲಾದರೂ ಹಠಾತ್ ಆಗಿ ಕೋಳಿಗಳು ಸಾವನ್ನಪ್ಪಿದರೆ ಗಮನಕ್ಕೆ ತರಲು ತಿಳಿಸಲಾಗಿದೆ.
ಮಹಾರಾಷ್ಟ್ರದಿಂದ ಕೋಳಿ ಹಾಗೂ ಮೊಟ್ಟೆ ಸಾಗಾಟವಾಗದಂತೆ ಚೆಕ್‌ಪೋಸ್ಟ್‌ಗಳಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಮಾಂಸಾಹಾರ ಪ್ರಿಯರು ಮಾಂಸ ಹಾಗೂ ಮೊಟ್ಟೆಗಳನ್ನು ಹೆಚ್ಚು ಬೇಯಿಸಿ ತಿನ್ನಬೇಕು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಆದರೆ, ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಐದು ಲಕ್ಷದವರೆಗೆ ಉಚಿತ ಚಿಕಿತ್ಸೆ ನಿಯಮವಿದ್ದರೂ ಕೆಲ ಆಸ್ಪತ್ರೆಗಳು ರೋಗಿಗಳಿಂದ ಹಣ ಪಡೆಯುತ್ತಿರುವ ಪ್ರಕರಣಗಳ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ ಅವರು ಜಿಲ್ಲಾಧಿಕಾರಿ ಗಮನಕ್ಕೆ ತಂದರು.
ಹಣ ಪಡೆದ ಆಸ್ಪತ್ರೆಗಳು ಹಣವನ್ನು ಮರಳಿ ರೋಗಿಗಳಿಗೆ ಸಂದಾಯ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳು, ಪಶು ಪಾಲನಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು ಪರಿಶಿಷ್ಟ ಪಂಗಡಕ್ಕೆ…
ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…