ಬೀದರ.15.ಫೆಬ್ರವರಿ.25: ಬೀದರ ನಗರದ ಭಾರತೀಯ ಸ್ಟೇಟ್ ಬ್ಯಾಂಕ ಮುಖ್ಯ ಶಾಖೆ ಎಟಿಎಂಗಳಿಗೆ ಹಣ ತುಂಬುವ ಜವಾಬ್ದಾರಿ ಹೊತ್ತಿದ್ದ ಸಿಎಂಎಸ್ ಕಂಪನಿ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ ಮಾಡಿ, 95 ಲಕ್ಷ ರೂಪಾಯಿ ಹಣದೊಂದಿಗೆ ಹೈದರಾಬಾದ್ನತ್ತ ಪರಾರಿಯಾಗಿದ್ದ ಆರೋಪಿಗಳು ಇನ್ನೂವರೆಗೂ ಪತ್ತೆಯಾಗಿಲ್ಲ.
ಈ ದರೋಡೆಕೋರರ ಸುಳಿವು ಕೊಟ್ಟವರಿಗೆ ಬೀದರ್ ಪೊಲೀಸರು ಬಹುಮಾನ ಘೋಷಣೆ ಮಾಡಿದ್ದಾರೆ.
ಬಿಹಾರ್ ಮೂಲದ ದರೋಡೆಕೋರರಾದ ಅಮನ್ ಕುಮಾರ್, ಅಲೋಕ್ ಕುಮಾರ್ ಸುಳಿವು ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ದರೋಡೆ ನಡೆದಿದ್ದು ಹೇಗೆ? ಎಲ್ಲಿ? ಯಾವಾಗ?
ಜನವರಿ 16 ರಂದು ಬೀದರ್‌ನಲ್ಲಿ ಹಾಡುಹಗಲೇ ಸಿನಿಮೀಯ ರೀತಿ ದರೋಡೆಯೊಂದು ನಡೆದಿತ್ತು. ಗಡಿ ಜಿಲ್ಲೆಯ ಜನರು ಅಕ್ಷರಶಃ ಬೆಚ್ಚಿ ಬಿದ್ದಿದ್ದರು. ಬೀದರ್ ನಗರದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನ್ಯಾಯಾಲಯದ ಸನಿಹದಲ್ಲಿನ ಎಟಿಎಮ್ನಲ್ಲಿ ಹಣ ಹಾಕಲು ಬಂದಿದ್ದ ಸಿಎಂಎಸ್ ಏಜೆನ್ಸ್ ಸಿಬ್ಬಂದಿಗಳ ಮೇಲೆ ಬೈಕ್ನಲ್ಲಿ ಬಂದಿದ್ದ ಮುಸುಕುದಾರಿ ದರೋಡೆಕೋರರು ಗುಂಡಿನ ದಾಳಿ ನಡೆಸಿದ್ದರು.
ಎಟಿಎಂಗೆ ಹಣ ಹಾಕುತ್ತಿದ್ದ ಸಿಎಂಎಸ್ ಎಜೆನ್ಸಿಯ ಗಿರಿ ವೆಂಕಟೇಶ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಬೆಳಗ್ಗೆ 10:55 ಸುಮಾರಿಗೆ ಬೈಕ್ನಲ್ಲಿ ಬಂದ ಮುಸುಕುದಾರಿ ಇಬ್ಬರು ದರೋಡೆಕೋರರ ಗ್ಯಾಂಗ್ ಕಣ್ಣಿಗೆ ಖಾರದ ಪುಡಿ ಎರಚಿ 10 ಸುತ್ತು ಗುಂಡು ಹಾರಿಸಿ 83 ಲಕ್ಷ ರೂ. ಇದ್ದ ಹಣದ ಪೆಟ್ಟಿಗೆ ಕದ್ದೊಯ್ದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಂದ ಮೃತ ಗಿರಿ ವೆಂಕಟೇಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಪೊಲೀಸರ ತಂಡ, ಬೆರಳಚ್ಚು ತಜ್ಞರು ಶ್ವಾನ ದಳ ಆಗಮಿಸಿ ಪರಿಶೀಲನೆ ನಡೆಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೀದರ್ ಜಿಲ್ಲಾ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಹಣದ ಪೆಟ್ಟಿಗೆ ತೆಗೆದುಕೊಂಡು ಹೋದ ಇಬ್ಬರು ಖದೀಮರ ಬೆನ್ನು ಬಿದ್ದಿರುವ ಪೊಲೀಸರು ಆರೋಪಿಗಳ ಚಲನವಲನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ.
ಬೀದರ್ ಶೂಟೌಟ್ ಆರೋಪಿಗಳಿಗಾಗಿ ತೀವ್ರ ಶೋಧ: ದರೋಡೆಕೋರರು ಹೈದರಾಬಾದ್ನಲ್ಲೇ ಇರುವ ಶಂಕೆ
ಎಟಿಎಂಗೆ ಹಾಕುವ ಹಣದ ಪೆಟ್ಟಿಗೆ ಜೊತೆ ದರೋಡೆಕಾರರು ಬೀದರ್ನಿಂದ ನೇರವಾಗಿ ಹೈದರಾಬಾದ್ಗೆ ಹೋಗಿದ್ದಾರೆ. ದರೋಡೆಕೋರರು ಹೈದರಾಬಾದ್ ಅಬ್ಜಲ್ ಗಂಜ್ನಲ್ಲಿ ಪ್ರತ್ಯಕ್ಷರಾಗಿದ್ದರು. ಹೈದರಾಬಾದ್ನಿಂದ ಖಾಸಗಿ ಬಸ್ನಲ್ಲಿ ಛತ್ತಿಸಗಡದ ರಾಯಪುರಕ್ಕೆ ಸತೀಶ್ಅನ್ನೋವರ ಹೆಸರಿಗೆ ಟಿಕೇಟ್ ಬುಕ್ ಮಾಡಿದ್ದರು.
ಅಲ್ಲಿ ಖಾಸಗಿ ಬಸ್ನ ಸಿಬ್ಬಂದಿ ಲಗೇಜ್ ಚೇಕ್ ಮಾಡುವಾಗ ಅದಕ್ಕೆ ದರೋಡೆಕೋರರು ಅಪೋಸ್ ಮಾಡಿದ್ದಾರೆ, ಆದರೆ ನಾವು ಲಗೇಜ್ ಚೇಕ್ ಮಾಡುತ್ತೇವೆ ಎಂದು ಖಾಸಗಿ ಬಸ್ ಚಾಲಕರು ಒತ್ತಾಯ ಮಾಡಿದ್ದಾರೆ.
ತಕ್ಷಣ ದುಷ್ಕರ್ಮಿಗಳು ತಮ್ಮ ಬಳಿ ಇದ್ದ ಪಿಸ್ತೋಲ್ನಿಂದ ಗುಂಡು ಹಾರಿಸಿದ್ದಾರೆ. ದುಷ್ಕರ್ಮಿಗಳು ಹಾರಿಸಿದ ಗುಂಡು ಖಾಸಗಿ ಬಸ್ ಮ್ಯಾನೇಜರ್ ಹಾಗೂ ಕ್ಲಿನರ್ಗೆತಗುಲಿದ್ದು ಅವರನ್ನ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಪಿಗಳಿಗಾಗಿ ಪೊಲೀಸರು ಇನ್ನೂ ಹುಡುಕಾಟ ನಡೆಸಿದ್ದಾರೆ.
ಬೀದರ ಪೊಲೀಸ ದರೋಡೆಕೋರರ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆ ಮಾಡಿದ್ದಾರೆ.
ಕೊಪ್ಪಳ.13.ಆಗಸ್ಟ್.25: ಕನಕಗಿರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಅಂತರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಹೆಚ್.ಐ.ವಿ. ಏಡ್ಸ್ ಜಾಗೃತಿ ಅರಿವಿನ…
ಬೀದರ.13.ಆಗಸ್ಟ್.25:- ಇಂದು ಬೀದರ್ ಜಿಲ್ಲಾಡಳಿತ ವತಿಯಿಂದ ನಶಾ ಮುಕ್ತ ಭಾರತ ಅಭಿಯಾನ" ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ…
ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್" ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…
ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ…
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…