ಬೀದರ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.!

ಬೀದರ.04.ಮಾರ್ಚ.25:-  ರಾಜ್ಯ ಬಾಲಕಾರ್ಮಿಕ ನಿರ್ಮೂಲನೆ ಕ್ರಿಯಾಯೋಜನೆ ಅನ್ವಯ ಬೀದರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗ ಕಂ. ಕಛೇರಿಯ ಸಹಾಯಕರ ಹುದ್ದೆಯನ್ನು (ಗೌರವಧನ ಆಧಾರ) ನೇಮಕಾತಿ ಮಾಡಿಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.


ವಿದ್ಯಾರ್ಹತೆ: ಬಿ.ಕಾಂ. ಪದವಿಯನ್ನು ಹೊಂದಿರಬೇಕು, ಬಿ.ಕಾಂ. ಪದವಿಯಲ್ಲಿ 60% ಪ್ರತಿಶತ ಮೇಲ್ಪಟ್ಟಿರಬೇಕು. ಲೆಕ್ಕ ಪತ್ರಗಳನ್ನು ನಿರ್ವಹಿಸುವಲ್ಲಿ/ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ ಪಕ್ಷ 3 ವರ್ಷಗಳ ಅನುಭವ ಹೊಂದಿರಬೇಕು.

ಲೆಕ್ಕಪತ್ರದಲ್ಲಿ ಬ್ಯಾಂಕ ವ್ಯವಹಾರಗಳನ್ನು ಸರ್ಕಾರದ ಲೆಕ್ಕ ಪತ್ರಗಳನ್ನು ತಯಾರಿಸುವ ಲೆಕ್ಕ ಪತ್ರಗಳಿಗೆ ಸಂಬಂಧಿಸಿದ ದಾಖಲೆ ರಜಿಸ್ಟರಗಳ ಕುರಿತು ಮಾಹಿತಿ ಹೊಂದಿರಬೇಕು.


ಅರ್ಹರು ಅರ್ಜಿಯನ್ನು ಸಲ್ಲಿಸಲು ನಿಗದಿತ ನಮೂನೆಗಳನ್ನು ಯೋಜನಾ ನಿರ್ದೇಸಕರು, ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು, (ಜಿಲ್ಲಾ ಬಾಲಕಾರ್ಮಿಕ ಯೋಜನೆ), ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಶಿವನಗರ (ಉ) ಬೀದರ ಕಾರ್ಯಾಲಯ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 12-03-2025 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

6 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

7 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

7 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

8 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

9 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

10 hours ago