01.ಜಿ.25. ಬೀದರ:- ಕಲ್ಯಾಣ್ ಕರ್ಣಾಟಕ ರಸ್ತೆ ಸಾರಿಗೆ ನಿಗಮ ವತಿಯಿಂದ ಫೋನ್-ಇನ್ ಕಾರ್ಯಕ್ರಮ (ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸುವ) ಸಂಬಂಧ ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ…….
ದಿನಾಂಕ: 06-01-2025 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ವಿಭಾಗದ ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಣ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ ದೂರವಾಣಿ ಸಂಖ್ಯೆ (7760992200), (7760992202) ಗೆ ಕರೆ ಮಾಡಿ ಮನವಿ, ಸಮಸ್ಯೆ ಹಾಗೂ ಸಲಹೆಗಳನ್ನು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಫೋನ್ ಇನ್ ಕಾರ್ಯಕ್ರಮದಲೀ ಸಮಸ್ಯೆ ಹಾಗೂ ಸಲಹೆಗಳನ್ನು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.