ಬೀದರ್, ಅ. 2: ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಅಬ್ದುಲ್ ಮನ್ನಾನ್ ಸೇಠ್ ಅವರಿಗೆ ಸಚಿವ ಈಶ್ವರ್ ಖಂಡ್ರೆ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ನೂತನ ಅಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತಷ್ಟು ಬಲಿಷ್ಠವಾಗಿ ಬೆಳೆದು, ಪಕ್ಷದ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವುದರ ಜೊತೆಗೆ ಕಾರ್ಯಕರ್ತರನ್ನು ಒಗ್ಗೂಡಿಸಿ ಜನಸೇವೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಲಿ ಎಂದು ಅವರು ಆಶಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀ ಬಸವರಾಜ್ ಜಾಬಶೆಟ್ಟಿ ಅವರ ಕೊಡುಗೆ ಹಾಗೂ ಪಕ್ಷದ ಸಂಘಟನೆಗಾಗಿ ಸಲ್ಲಿಸಿದ ಸೇವೆಯನ್ನು ಅಭಿನಂದಿಸಿದ ಈಶ್ವರ್ ಖಂಡ್ರೆ ಅವರು, ನೂತನ ಮತ್ತು ಹಳೆಯ ನಾಯಕತ್ವದ ಅನುಭವ ಹಾಗೂ ಕಾರ್ಯಕರ್ತರ ಒಗ್ಗಟ್ಟಿನೊಂದಿಗೆ ಬೀದರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಸದೃಢವಾಗಿ ಮುನ್ನಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.





Any questions related to ಬೀದರ ಜಿಲ್ಲಾ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿ – ಈಶ್ವರ ಖಂಡ್ರೆ ಆಶಯ?