ಬೀದರ | ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು

ಬೀದರ.05.ಏಪ್ರಿಲ್.25: – ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೀದರ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೀದರ ಇವರ ಸಂಯುಕ್ತಾಶ್ರಯದಲ್ಲಿ 2025ನೇ ಏಪ್ರಿಲ್. 5 ಮತ್ತು 6 ರಂದು ನೆಹರು ಕ್ರೀಡಾಂಗಣ ಬೀದರದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜಿಸಲಾಗಿರುತ್ತದೆ.


ಏಪ್ರಿಲ್.5 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಗಣ ಬೀದರದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಉದ್ಘಾಟಿಸಲಿದ್ದಾರೆ.


ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ವಹಿಸಲಿದ್ದಾರೆ. ಹಾಗೂ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕರಾದ ಶರಣು ಸಲಗರ, ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕರಾದ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ್, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಅವರುಗಳು ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಬೀದರ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ಅವರು ಭಾಗವಹಿಸಲಿದ್ದಾರೆ.


ಸಾಯಂಕಾಲ 6 ಗಂಟೆಗೆ ಡಾ.ಚನ್ನಬಸವ ಪಟ್ಟದ್ದೇವರು ರಂಗ ಮಂದಿರ ಬೀದರದಲ್ಲಿ ಕಲಬುರಗಿ ಹಾಸ್ಯ ಕಲಾವಿದರಾದ ಗುಂಡಣ್ಣ ಡಿಗ್ಗಿ ಹರಸೂರ ಹಾಗೂ ಹಾಸ್ಯ ಕಲಾವಿದರು ಹಾಗೂ ಗಾಯಕರು ಬೀದರನ ವೈಜನಾಥ ಸಜ್ಜನಶೆಟ್ಟಿ ಅವರಿಂದ ಸಾಂಸ್ಕೃತಿಕ ಮತ್ತು ಹಾಸ್ಯ ಸಂಜೆ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಬೀದರ ಸಹಾಯಕ ಆಯುಕ್ತರಾದ ಮಹ್ಮದ್ ಶಕೀಲ್ ಅವರು ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೀದರ ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕರಾದ ರವಿ ಹಕಾರಿ, ಬೀದರ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಲೀಂ ಪಾಶಾ, ಬೀದರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ ಹಾಗೂ ಅಧ್ಯಕ್ಷತೆಯನ್ನು ಬೀದರ ಕ.ರಾ.ಸ.ನೌ.ಸಂಘದ ಜಿಲ್ಲಾಧ್ಯಕ್ಷರಾದ ಸೋಮಶೇಖರ ಬಿರಾದಾರ ಚಿದ್ರಿ ಅವರು ವಹಿಸಲಿದ್ದಾರೆ.
ಏಪ್ರಿಲ್.6 ರಂದು ಸಾಯಂಕಾಲ 4 ಗಂಟೆಗೆ ನೆಹರು ಕ್ರೀಡಾಂಗಣ ಬೀದರದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.


ಮುಖ್ಯ ಅತಿಥಿಗಳಾಗಿ ಬೀದರ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಬೀದರ ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿಗಳಾದ ಶ್ರೀಕಾಂತ, ಬೀದರ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಜ್ಞಾನೇಶ್ವರ ನಿರಗುಡೆ, ಶಾಹೀನ್ ಶಿಕ್ಷಣ ಸಮೂಹದ ಅಧ್ಯಕ್ಷರಾದ ಡಾ.ಅಬ್ದುಲ್ ಖದೀರ ಹಾಗೂ ಅಧ್ಯಕ್ಷತೆಯನ್ನು ಬೀದರ ಕ.ರಾ.ಸ.ನೌ.ಸಂಘದ ಜಿಲ್ಲಾಧ್ಯಕ್ಷರಾದ ಸೋಮಶೇಖರ ಬಿರಾದಾರ ಚಿದ್ರಿ ವಹಿಸಲಿದ್ದಾರೆ.

ಉಪಸ್ಥಿತಿಯನ್ನು ಬೀದರ ಕ.ರಾ.ಸ.ನೌ.ಸಂಘದ ಕಾರ್ಯದರ್ಶಿಗಳಾದ ಪ್ರಭುಲಿಂಗ ತುಗಾಂವೆ, ಬೀದರ ಕ.ರಾ.ಸನೌ.ಸಂಘದ ರಾಜ್ಯ ಪರಿಷತ್ತ ಸದಸ್ಯರಾದ ರಾಜಕುಮಾರ ಮಾಳಗೆ, ಬೀದರ ಕ.ರಾ.ಸ.ನೌ.ಸಂಘದ ಕೋಶಾಧ್ಯಕ್ಷರಾದ ದೇವಪ್ಪ ಚಾಂಬೋಳೆ ಅವರುಗಳು ವಹಿಸಲಿದ್ದಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

6 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

6 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

6 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

6 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

7 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

7 hours ago