ಪ್ರಜಾಪ್ರಭಾತ: ಬೀದರ: ೦೩, ೩೭೧ಜೆ ಅಡಿಯಲ್ಲಿ ಬರುವ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೆಕವಾಗಿ ಈ ಸಲದ ಬಜೇಟ್‌ನಲ್ಲಿ ವಿಶೇಷ ಅನುದಾನ ಮೀಸಲಿಟ್ಟು ಈ ಭಾಗದ ಏಳ್ಗೆಗಾಗಿ ಅದರಲ್ಲೂ ಬೀದರ ಜಿಲ್ಲಾ ಕೈಗಾರಿಕೆ ಸ್ಥಾಪನೆಗಾಗಿ ಹೆಚ್ಚು ಒತ್ತು ನೀಡಬೇಕೆಂದು ಉದ್ಯಮಿ ಹಾಗೂ ಎಸ್.ಸಿ.ಎಸ್.ಟಿ. ಕೈಗಾರಿಕಾ ಉದ್ಯಮಿದಾರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಪ್ರಥ್ವಿರಾಜ್ ಎಸ್. ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಅವರು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿ ಸಾಮಾಜಿಕ, ಆರ್ಥಿಕ, ಮತ್ತು ಶೈಕ್ಷಣಿಕವಾಗಿ ಬೀದರ ಜಿಲ್ಲೆ ಪ್ರಗತಿ ಹಂತದಲ್ಲಿದ್ದು, ಇನ್ನು ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ಹಾಗಾಗಿ ಮಾನ್ಯ ಮುಖ್ಯಮಂತ್ರಿಗಳು ಈ ಸಲದ ಅಧಿವೇಶನದಲ್ಲಿ ಮಂಡಿಸಲಿರುವ ಅಯವ್ಯಯದಲ್ಲಿ ಬೀದರ ಜಿಲ್ಲೆಗೆ ಹೆಚ್ಚಿನ ಒತ್ತು ಕೊಟ್ಟು ಪಗ್ರತಿ ಹಂತದಲ್ಲಿರುವ ಈ ನಾಡಿಗೆ ಇನ್ನೂ ಪುಷ್ಠಿ ನೀಡಿ ಅದರಲ್ಲಿ ಕೈಗಾರಿಕೆ ಕ್ಷೇತ್ರಕ್ಕೆ ಇನ್ನು ಬಲ ತುಂಬಬೇಕಿದೆ. ಇಲ್ಲಿಯ ನಿರುದ್ಯೋಗ ಯುವಕರಿಗೆ ಉದ್ಯೋಗದ ದೃಷ್ಠಿಕೋನದಿಂದ ಇಲ್ಲಿಯ ಕೈಗಾರಿಕೆಗಳ ಉನ್ನತಿ ಅತ್ಯವಶ್ಯಕವಾಗಿದೆ.
ಹಲವಾರು ವರ್ಷಗಳಿದ ನೆನೆಗುದಿಗೆ ಬಿದ್ದಿರುವ ಮಹಿಳಾ ಪಾರ್ಕ್ ಸ್ಥಾಪನೆ ಆದಷ್ಟು ಬೇಗ ಹೆಚ್ಚು ಒತ್ತು ನೀಡಬೇಕು. ಬೀದರ ನಗರದ ಕೊಳಾರ ಕೈಗಾರಿಕಾ ಪ್ರದೇಶದಲ್ಲಿ ಸುಮಾರು ವರ್ಷಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆಯಿದ್ದು, ಈಗಾಗಲೆ ಪೈಪಲೈನ್ ಅಳವಡಿಸಿ ಎರಡ್ಮೂರು ವರ್ಷಗಳು ಕಳೆದರೂ ಇಲ್ಲಿಯವರೆಗೆ ಯಾವುದೇ ನೀರಿನ ಸಪ್ಲೆöÊ ನೀಡಲಾಗಿಲ್ಲ. ಇಂತಹ ಮೂಲಭೂತ ಅನೇಕ ಸಮಸ್ಯೆಗಳಿದ್ದು ಈ ಬಗ್ಗೆ ಹೆಚ್ಚಿನ ಒತ್ತು ನೀಡಿ ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕೆಂದು ತಮ್ಮಲ್ಲಿ ಈ ಮೂಲಕ ಮನವಿ ಮಾಡಿಕೊಳ್ಳಲಾಗುತ್ತಿದೆ.
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…