01ಡಿ25 ಬೀದರ:- ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದೆ ವಿವಿಧ ಯೋಜನೆಗಳ ಪರಿಶೀಲನಾ ಸಮಿತಿಯ ಬೀದರ ಸಭೆಯ 04/01/2025 ಕೆ ಮುಂದಿಡಲಾಗಿದೆ
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಅವರ ಅಧ್ಯಕ್ಷತೆಯಲ್ಲಿ ಜನವರಿ.2 ರಂದು ಬೆಳಿಗ್ಗೆ 11 ಗಂಟೆಗೆ ಕರೆಯಲಾದ ಪ್ರಗತಿ ಪರಿಶೀಲನಾ ಸಭೆಯನ್ನು ಮುಂದೂಡಿ, ಜನವರಿಗೆ 4 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.