19ಡಿಸೆಂಬರ್24 ಬೀದರ್:- ಇಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಬೀದರ್ ಜಿಲ್ಲೆಯಲ್ಲಿ ಮುಂದಿನ ಮೂರ್ನಾಲ್ಕು ದಿನಗಳವರೆಗೆ ಜಿಲ್ಲೆಯಾದ್ಯಂತ ಶೀತಗಾಳಿ ಬೀಸಲಿದ್ದು, ಸಾಮಾನ್ಯ ತಾಪಮಾನಕ್ಕಿಂತ 5 ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ. ‘ಸೂರ್ಯೋದಯಕ್ಕಿಂತ ಮುಂಚೆ, ಸೂರ್ಯಾಸ್ತದ ನಂತರ ವಾಕಿಂಗ್ ಮಾಡುವವರು ಎಚ್ಚರ ವಹಿಸಬೇಕು. ದ್ವಿಚಕ್ರ ವಾಹನಗಳಲ್ಲಿ ಹೊರಗೆ ಓಡಾಡಬಾರದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಮನವಿ ಮಾಡಿದ್ದಾರೆ.
ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಹವಾಮಾನ ಸಂಪೂರ್ಣ ಬದಲಾಗಿದೆ. ಚಳಿಯ ಪ್ರಮಾಣ ಜಾಸ್ತಿ ಆಗಿದೆ. ಸದ್ಯ ಬೀದರ್ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ಇದೆ.
ಇಂದಿನ ಮಾಹಿತಿಪ್ರಕಾರ್ ಮುಂದಿನ 3 ರಿಂದ 4 ದಿನಗಳಲ್ಲಿ ಇದರಲ್ಲಿ 5 ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗಬಹುದು.
ಸಾರ್ವಜನಿಕರು ಅನುಸರಿಸಬೇಕಾದ ಮುನ್ನಚ್ಚರಿಕೆ ಕ್ರಮಗಳು: ಸಾರ್ವಜನಿಕರು ಸಾಧ್ಯವಾದಷ್ಟು ಮನೆ ಬಿಟ್ಟು ಹೊರಗಡೆ ಬರಬಾರದು,
ಒಂದು ವೇಳೆ ಅವಶ್ಯವಿದ್ದಲ್ಲಿ ಬೆಚ್ಚನೆಯ ಉಡುಪುಗಳಾದ ಸ್ಟೇಟರ್, ಜಾಕೇಟ್, ಉಲನ್ ಟೋಪಿ ಕಾಲುಕುಬಸ್. ಕೈ ಗೌಸ್ ಗಳನ್ನು ಧರಿಸಬೇಕು. ಮಕ್ಕಳನ್ನು ಹಾಗೂ ರೈತ ಬಾಂಧವರು ಈ ದಿವಸಗಳಲ್ಲಿ ವಿಶೇಷವಾಗಿ ರಾತ್ರಿ ಸಮಯದಲ್ಲಿ ಹೊಲಗಳಲ್ಲಿ ತಂಗುವುದು ಮತ್ತು ಹಗಲಿನಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳದಿರಲು ತಿಳಿಸಿದೆ.
ಅವಶ್ಯವಿದ್ದಲ್ಲಿ ಮಾತ್ರ ಬೆಚ್ಚನೆಯ ಉಡುಪುಗಳಾದ ಸ್ಟೇಟರ್, ಜಾಕೇಟ್, ಉಲನ್ ಟೋಪಿಗಳನ್ನು ಧರಿಸಬೇಕು. ಮುನ್ನಚ್ಚರಿಕೆ ಕ್ರಮವಾಗಿ ರೈತರು ಹಿಂಗಾರು ಬೆಳೆಗಳಿಗೆ ಶೀತ ಗಾಳಿಯ ಪ್ರಭಾವವನ್ನು ಪ್ರತಿರೋದಿಸಲು Pಟಚಿಟಿoಜಿix 0.5 ಮಿಲಿ ಪ್ರತಿ ಲೀಟರ್ ನೀರಿಗೆ ಬೆರಿಸಿ ಸಿಂಪಡಿಸಬೇಕೆoದು ಅವರು ತಿಳಿಸಿದ್ದಾರೆ.
ಬೀದರ ಜಿಲ್ಲೆಯ ರೈತರೇ ಪ್ರಕೃತಿಕಡೆ ಗಮನಹರಿಸಿ ತಾವು ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕಾರ್ಯಚಟುವಟಿಕೆ 3 ರಿಂದ 4 ದಿನ್ ವಿರಾಮ ವಿರಲಿ.
Source: www.prajaprabhat.com
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…