|

ಬೀದರ ಜಿಲ್ಲೆಯಲ್ಲಿ ಸುರಿಯುತ್ತಿರುವ ಅತಿವೃಷ್ಟಿಯಿಂದ ಹಾನಿ ಪರಿಹಾರಕೆ ಸಭೆ.

ಬೀದರ.29.ಆಗಸ್ಟ್.25:- ಇಂದು ಬೀದರ ಜಿಲ್ಲೆಯಲ್ಲಿ ಸುರಿಯುತ್ತಿರುವ ಅತಿವೃಷ್ಟಿಯಿಂದ ಉಂಟಾದ ಹಾನಿ, ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಇಂದು ಬೀದರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆಯನ್ನು ನಡೆಸಿದರು.

ಸಭೆಯಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ರೈತರ ಬೆಳೆ ಹಾನಿ, ಮನೆ ಕುಸಿತ, ರಸ್ತೆ ಸಂಪರ್ಕ ವ್ಯತ್ಯಯ ಸೇರಿದಂತೆ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಇಲಾಖೆಯವರಿಂದ ಸಂಪೂರ್ಣ ಮಾಹಿತಿಯನ್ನು ಪಡೆದರು. ಈ ಸಂದರ್ಭದಲ್ಲಿ ಸಚಿವರು ಅಧಿಕಾರಿಗಳಿಗೆ ಪೀಡಿತ ಪ್ರದೇಶಗಳಲ್ಲಿ ತ್ವರಿತ ಪರಿಹಾರ ಕಾರ್ಯ ಕೈಗೊಳ್ಳುವಂತೆ, ಪೀಡಿತ ಕುಟುಂಬಗಳಿಗೆ ತಕ್ಷಣದ ನೆರವು ಒದಗಿಸುವಂತೆ ಹಾಗೂ ನಷ್ಟದ ಅಂಕಿ ಅಂಶಗಳನ್ನು ನಿಖರವಾಗಿ ಸಂಗ್ರಹಿಸುವಂತೆ ಸೂಚಿಸಿದರು.

Similar Posts

Leave a Reply

Your email address will not be published. Required fields are marked *