ಬೀದರ.13.ಜೂನ್.25:- ಗೌರವಾನ್ವಿತ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ.12 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಅವರು ತಿಳಿಸಿದರು.
ಅವರು ಶುಕ್ರವಾರದಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಜುಲೈ.12 ರಂದು ನಡೆಯುವ ಬೃಹತ್ ಲೋಕ ಅದಾಲತ್‌ನ ಪೂರ್ವಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ, ವಿದ್ಯುತ್ ಪ್ರಕರಣಗಳು ಕಂದಾಯ ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು,ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ ಎಂದರು.
ಈ ಹಿಂದೆ ದಿನಾಂಕ 08.03.2025 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತನಲ್ಲಿ ಜಿಲ್ಲೆಯಾದ್ಯಾಂತ ಒಟ್ಟು 52,812 ಪ್ರಕರಣಗಳನ್ನು ಲೋಕಆದಲಾತನಲ್ಲಿ ಇತ್ಯರ್ಥಗೊಳಿಸಲಾಗಿದ್ದು ಇದರಲ್ಲಿ 10.044 ನ್ಯಾಯಾಲಯದಲ್ಲಿನ ಪೆಂಡಿoಗ್ ಪ್ರಕರಣಗಳು, 42.768 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.
ಈ ಬಾರಿ ಲೋಕಅದಾಲತನಲ್ಲಿ ನ್ಯಾಯಾಲಯದಲ್ಲಿ ಬಾಕಿ ಪೇಂಡಿoಗ ಇರುವ ಪ್ರಕರಣಗಳನ್ನು ಹೆಚ್ಚು ಹೆಚ್ಚು ಇತ್ಯಾರ್ಥಗೊಳಿಸಲು ಯೋಜನೆ ರೂಪಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 29,122 ಪ್ರಕರಣಗಳು ಪೆಂಡಿAಗ್ ಇದ್ದು ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಿದ್ದೇವೆ ಹಾಗೂ ಎಲ್ಲಾ ಪೂರ್ವತಯಾರಿ ಮಾಡಿಕೊಂಡಿದ್ದೇವೆ.
ಪ್ರಕರಣಳಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಲಯ ಶುಲ್ಕ ವಾಪಸ್ ಸಿಗಲಿದೆ ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶ ಇರುತ್ತದೆ ಹಾಗೆ ಯಾವುದೇ ಖರ್ಚು ವೆಚ್ಚ ಇಲ್ಲದೆ ಶೀಘ್ರವಾಗಿ ಪ್ರಕರಣಗಳು ಇತ್ಯರ್ಥವಾಗುತ್ತವೆ ಎಂದು ಅವರು ತಿಳಿಸಿದರು.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…