ಬೀದರ.29.ಮೇ.25:- ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಹಸಿಶುಂಠಿ ಖರೀದಿಸಲು ಬೀದರ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯು ಜಿಲ್ಲೆಯಲ್ಲಿ ಈಗಾಗಲೇ ಐದು ಖರೀದಿ ಕೇಂದ್ರಗಳನ್ನು ತೆರೆದಿದ್ದು, ಮೇ.31 ರಿಂದ ರೈತರ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ ಎಂದು ಬೀದರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2024-25ನೇ ಸಾಲಿನ ಕೃಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ FAQ ಗುಣಮಟ್ಟದ ಹಸಿಶುಂಠಿಯನ್ನು ರೈತರಿಂದ ಖರೀದಿಸಲಿದ್ದು, ಪ್ರತಿ ಕ್ವಿಂಟಾಲ್‍ಗೆ 2445-00 ಗಳಂತೆ ದರ ನಿಗಧಿಪಡಿಸಲಾಗಿದೆ. ಖರೀದಿ ಪ್ರಕ್ರಿಯೆಯಲ್ಲಿ ರೈತರು ಪ್ರತಿ ಎಕರೆಗೆ ಗರಿಷ್ಠ 30 ಕ್ವಿಂಟಾಲ್‍ನಂತೆ ಹಾಗೂ ಪ್ರತಿ ರೈತರಿಗೆ ಗರಿಷ್ಠ 60 ಕ್ವಿಂಟಾಲ್‍ನಂತೆ FAQ ಗುಣಮಟ್ಟದ ಹಸಿಶುಂಠಿ ಉತ್ಪನ್ನವನ್ನು ಮಾರಾಟ ಮಾಡಬಹುದಾಗಿದೆ.
ಬೀದರ ತಾಲ್ಲೂಕಿನ PACS ಮನ್ನಳ್ಳಿ, ಭಾಲ್ಕಿ ತಾಲ್ಲೂಕಿನ PACS ಭಾತಂಬ್ರಾ, ಬಸವಕಲ್ಯಾಣ ತಾಲ್ಲೂಕಿನ PACS ಮುಡಬಿ, ಹುಮನಾಬಾದ ತಾಲ್ಲೂಕಿನ PACS ದುಬಲಗುಂಡಿ, ಹಾಗೂ ಔರಾದ(ಬಾ) ತಾಲ್ಲೂಕಿನ PACS ಜೋಜನಾಗಳನ್ನು ಹಸಿಶುಂಠಿ ಖರೀದಿ ಕೇಂದ್ರಗಳೆಂದು ನಿಗಧಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತಿ ಬೆಂಗಳೂರು ರವರ ಬೀದರ ಜಿಲ್ಲಾ ಶಾಖಾ ವ್ಯವಸ್ಥಾಪಕರು, ಸಹಾಯಕ ನಿರ್ದೇಶಕರು, ಕೃಷಿ ಮಾರಾಟ ಇಲಾಖೆ ಬೀದರ ಹಾಗೂ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ ಬೀದರ ಇವರನ್ನು ಸಂಪರ್ಕಿಸಲು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…