ಬೀದರ.11.ಫೆಬ್ರುವರಿ.25:- ಬೀದರ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ವದೇಶ ದರ್ಶನ ಯೋಜನೆಯಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮನವಿಗೆ ಸ್ಪಂದಿಸಿರುವ ಕೇಂದ್ರದ ಪ್ರವಾಸೋದ್ಯಮ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಬೀದರ ಪ್ರವಾಸೋದ್ಯಮಕ್ಕೆ ರೂ. 25 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದರು ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಜಿಲ್ಲೆಯ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ಅನುದಾನ ಬಳಕೆಯಾಗಲಿದೆ. ಪ್ರಸ್ತುತ ಪ್ರವಾಸೋದ್ಯಮ ಇಲಾಖೆಯು ಕ್ರಿಯಾಯೋಜನೆ ತಯ್ಯಾರಿಸುತ್ತಿದ್ದು, ಶೀಘ್ರದಲ್ಲೇ ಅನುದಾನ ಬಿಡುಗಡೆಗೊಳ್ಳಲಿದೆ ಹಾಗೂ ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭವಾಗಲಿವೆ.
ಈ ಅನುದಾನದ ನೆರವಿನಿಂದ ಬೀದರ್‌ನ ಪ್ರವಾಸಿ ತಾಣಗಳ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರವಾಸಿಗರಿಗೆ ಉತ್ತಮ ಸೌಲಭ್ಯಗಳ ಕಲ್ಪನೆ ಸಾಧ್ಯವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…