ಬೀದರ್.03.ಜೂನ.26 : 2026ರ ಮೇ 30 ರಂದು ಶ್ರೀ ಮಹ್ಮದ್ ಜಾಫರ್ ಸಾದಿಕ್ ಅವರು ಬೀದರ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಪ್ರಭಾರವನ್ನು ವಹಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಬೀದರ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರು ತಿಳಿಸಿದ್ದಾರೆ.
ಶ್ರೀ ಮಹ್ಮದ್ ಜಾಫರ್ ಸಾದಿಕ್ ಅವರು ಮೇ.30 ರಂದು ಅಪರಾಹ್ನ ಬೀದರ ಸಾರಿಗೆ ಕಛೇರಿಗೆ ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದು, ಜೊತೆಗೆ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಸವಕಲ್ಯಾಣ ಮತ್ತು ಹುಮನಾಬಾದ ತನಿಖಾ ಠಾಣೆಯ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ.
ಸಾರ್ವಜನಿಕರಿಗೆ ತ್ವರಿತ, ಪಾರದರ್ಶಕ ಹಾಗೂ ಪರಿಣಾಮಕಾರಿ ಸೇವೆ ಒದಗಿಸುವುದು ತಮ್ಮ ಆದ್ಯತೆಯಾಗಿದ್ದು, ಚಾಲನಾ ಪರವಾನಗಿ, ವಾಹನ ನೋಂದಣಿ, ತೆರಿಗೆ ಪಾವತಿ, ಪರವಾನಿಗೆ ನವೀಕರಣ ಸೇರಿದಂತೆ ಎಲ್ಲಾ ಸೇವೆಗಳನ್ನು ನಿಯಮನುಸಾರ ಮತ್ತು ಸುಗಮವಾಗಿ ಒದಗಿಸುವುದು ಪ್ರಥಮ ಆದ್ಯತೆ ಆಗಿದೆ ಎಂದು ಸೂಚಿಸಿದರು.
ಹೆಚ್ಚಿನ ಮಾಹಿತಿಗಾಗಿ ಬೀದರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಬೀದರ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಶ್ರೀ ಮಹ್ಮದ್ ಜಾಫರ್ ಸಾದಿಕ್ ಕರ್ತವ್ಯಕ್ಕೆ ಸೂಚನೆ?