ಬೀದರ.07ಜನೆವರಿ.25 ಬೀದರ ನಗರ 09. ಜನೆವರಿ ಬಂದಗೆ ಗ್ರಹ ಸಚಿವ ಅಮಿತ್ ಶಾ ವಿರುದ್ಧ ಬಹುಜನ ಸಮಾಜ ಪಾರ್ಟಿ ಸೇರಿದಂತೆ ಅನೇಕ ದಲಿತಪರ, ಪ್ರಗತಿಪರ ಸಂಘಟನೆಗಳಿಂದ ಹೋರಾಟಗಳು ಬಿಎಸ್ಪಿ ಬೆಂಬಲಸೂಚಿಸಿದೆ…’ಅಂಬೇಡ್ಕರ್ ಅಂಬೇಡ್ಕರ್ ಅನ್ನುವುದು ಒಂದು ಫ್ಯಾಷನ್ ಆಗಿಬಿಟ್ಟಿದೆ.
ಅಂಬೇಡ್ಕರ ಹೆಸರನ್ನು ಪದೇ ಪದೇ ಉಚ್ಚರಿಸುವ ಬದಲು ದೇವರನ್ನು ಸ್ಮರಿಸಿದರೆ ಏಳೇಳು ಜನ್ಮಗಳಲ್ಲಿ ಸ್ವರ್ಗ ದೊರೆಯುತ್ತಿತ್ತು ಎಂದು ರಾಜ್ಯಸಭೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ತೋರಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಕರೆ ಬೀದರ್ ಬಂದ್‌ಗೆ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಸಂಪೂರ್ಣ ಬೆಂಬಲ ಸೂಚಿಸಿದ್ದು, ಹೋರಾಟಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕಪೀಲ್ ಗೋಡಬೋಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶದಾದ್ಯಂತ ಗ್ರಹ ಸಚಿವ ಅಮಿತ್ ಶಾ ವಿರುದ್ಧ ಬಹುಜನ ಸಮಾಜ ಪಾರ್ಟಿ ಸೇರಿದಂತೆ ಅನೇಕ ದಲಿತಪರ, ಪ್ರಗತಿಪರ ಸಂಘಟನೆಗಳಿಂದ ಹೋರಾಟಗಳು ನಡೆಯುತ್ತಿದ್ದರೂ ಇಲ್ಲಿಯವರೆಗೆ ಬೇಜವಾಬ್ದಾರಿ ಹೇಳಿಕೆ ನೀಡಿರುವ ಅಮಿತ್ ಶಾ ರಾಜೀನಾಮೆಗೆ ಮುಂದಾಗುತ್ತಿಲ್ಲ.
ಈ ಬಂದ್ ನ್ನು ಬೆಂಬಲಿಸಿ ಹಲವಾರು,ವ್ಯಾಪಾರಿಗಳು, ಮಾರುಕಟ್ಟೆಯ ವರು, ತರಕಾರಿ ಸಂಘ, ಹೋಟೆಲ್ ಮಾಲೀಕರು, ಬಜಾರ್, ಕಿರಾಣಾ ಬಜಾರ್, ಬಟ್ಟೆ ಬಜಾರ್ ಹೀಗೆ ಹಲವಾರು ಸಂಘ ಸಂಸ್ಥೆಗಳು ಬೆಂಬಲಿಸಿ ಸಹಕರಿಸಿ ಯಶಸ್ವಿಗೊಳಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಹೀಗಾಗಿ ಬೀದರ್ ಬಂದ್ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಲು ಜಿಲ್ಲೆಯ ಸಮಾಜ ಪರ ಚಿಂತಕರು, ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ ಭಾವಿದೊಡ್ಡಿ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಹೇಶ್ ಭೋಲಾ ಅವರು ಮನವಿ ಮಾಡಿದ್ದಾರೆ.
Source: www.prajaprabhat.com
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…