ಬೀದರ ಬಂಧ ಚಿತ್ರ.! ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ.!

ಬೀದರ್: 09.ಜನೆವರಿ.25 :- ಇಂದು ಬೀದರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಸಂಸತ್ ನಲ್ಲಿ ಅವಮಾನಕರ ಹೇಳಿಕೆ ನೀಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿ ನೀಡಿದ್ದ ಬೀದರ್ ಬಂದ್ ಕರೆಗೆ ಪೂರಕ ಸ್ಪಂದನ ವ್ಯಕ್ತವಾಗಿದೆ.

ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದರಿಂದ ಇಂದು ಬೀದರ್ ಭಾಗಶಃ ಸ್ತಬ್ಧವಾಗಿದೆ. ನಗರದ ಮೆಡಿಕಲ್, ಆಸ್ಪತ್ರೆ ಹಾಗೂ ಸರಕಾರಿ ಕಚೇರಿಗಳು ಬಿಟ್ಟರೆ ಉಳಿದೆಲ್ಲ ಅಂಗಡಿಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿವೆ. ಸರಕಾರಿ ಬಸ್ಸುಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದರಿಂದ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಕೆಲವೊಂದು ಖಾಸಗಿ ವಾಹನಗಳು ಬಿಟ್ಟರೆ ಯಾವುದೇ ವಾಹನಗಳು ಬೀದಿಗೆ ಇಳಿದಿಲ್ಲ.

ನೌಬಾದ್, ಶಿವನಗರ, ಅಂಬೇಡ್ಕರ್ ವೃತ್ತ, ಬಸವೇಶ್ವರ್ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳು ಜನಗಳಿಲ್ಲದೇ ಖಾಲಿ ಖಾಲಿಯಾಗಿ ಕಾಣುತ್ತಿವೆ.

ನಗರದಾದ್ಯಂತ ಅಂಗಡಿ ಮುಂಗಟ್ಟುಗಳಿಗೆ ಕಳೆದ ರಾತ್ರಿಯೇ ದಲಿತ ಸಂಘಟನೆಯ ಮುಖಂಡರು ಭೇಟಿ ನೀಡಿ ಅಂಗಡಿಗಳನ್ನು ಸ್ವ ಇಚ್ಛೆಯಿಂದ ಮುಚ್ಚಿ ಸಹಕರಿಸುವಂತೆ ಕೋರಿದ್ದರು. ಅದರಂತೆ ಇಂದು ನಗರದಲ್ಲಿ ಎಲ್ಲ ಅಂಗಡಿಗಳು ಮುಚ್ಚಲ್ಪಟ್ಟಿವೆ.

ಅಮಿತ್ ಶಾ ಪ್ರತಿಕೃತಿ ಸುಟ್ಟು ವಿದ್ಯಾರ್ಥಿಗಳಿಂದ ಆಕ್ರೋಶ

ನಗರದ ನೌಬಾದ್ ವಸತಿ ನಿಲಯದ ವಿದ್ಯಾರ್ಥಿಗಳು ಅಮಿತ್ ಶಾ ಅವರ ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು.

ಇಂದು ಬೆಳಗ್ಗೆ ನೌಬಾದ್ ವಸತಿ ನಿಲಯದ ವಿದ್ಯಾರ್ಥಿಗಳು ಅಮಿತ್ ಶಾ ವಿರುದ್ಧ ಘೋಷಣೆ ಕೂಗುತ್ತಾ, ತಮ್ಮ ವಸತಿ ನಿಲಯದಿಂದ ನೌಬಾದ್ ನ ಬಸವೇಶ್ವರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಸವೇಶ್ವರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.

ಬೀದರ ನಗರ ಸಂಪೂರ್ವಾಗಿ ಬಂದ….

prajaprabhat

Recent Posts

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

9 minutes ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

12 minutes ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

18 minutes ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

59 minutes ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

1 hour ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

6 hours ago