|

ಬೀದರ ವಾರ್ತಾ ಇಲಾಖೆ: ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿoದ ಅರ್ಜಿ ಆಹ್ವಾನ

ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿAದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಅಧೀನ ಕಚೇರಿಗಳ ಮೂಲಕ 2025-2 ನೇ ಸಾಲಿನಲ್ಲಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ಪ್ರತಿ ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಠ ವರ್ಗಕ್ಕೆ ಸೇರಿದ ಕಲಾವಿದರನನ್ನು ಒಳಗೊಂಡಿರಬೇಕು.

ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಠ ವರ್ಗಕ್ಕೆ ಸೇರಿದ ಕಲಾವಿದರು ಇರುವುದು ಕಡ್ಡಾಯವಾಗಿದೆ.

ಕಲಾ ತಂಡಗಳ ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, ದಿನಾಂಕ: 12-08-2025 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
ಅದೇ ಆಗಸ್ಟ್. 12 ರಂದು, ನಿಗದಿತ ಸಮಯಕ್ಕೆ ಬೀದರ ಜಿಲ್ಲೆಯ ಬೀದಿ ನಾಟಕ ಮತ್ತು ಜಾನಪದ ಸಂಗೀತ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆಯು ಬೀದರ ವಾರ್ತಾ ಇಲಾಖೆಯ ಸಭಾ ಭವನದಲ್ಲಿ ಜರುಗಲಿದೆ.

ಆಸಕ್ತ ಅರ್ಹ ಬೀದಿ ನಾಟಕ ತಂಡಗಳು ಮತ್ತು ಜಾನಪದ ಸಂಗೀತ ಕಲಾ ತಂಡಗಳು ದಿನಾಂಕ: 01-08-2025 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *