ಬೀದರ ವಿಶ್ವವಿದ್ಯಾಲಯ, ಬೀದರದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮ.!

ಬೀದರ್ : 24.ಜನೆವರಿ.25:- ಬೀದರ ವಿಶ್ವವಿದ್ಯಾಲಯ,ಬೀದರ      ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ  ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಹಾಗೂ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ದೇಶದ ಸದೃಢ ಅಭಿವೃದ್ಧಿಗಾಗಿ ಹಾಗೂ ಸುಸ್ಥಿರ ಸರಕಾರದ ನಿರ್ಮಾಣಕ್ಕಾಗಿ ಮತದಾನವು ಮಹತ್ವದ ಪಾತ್ರ ವಹಿಸುತ್ತದೆ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಅವರು ಅಭಿಪ್ರಾಯಪಟ್ಟರು

ಇಂದು ಬೀದರ್ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾನದಲ್ಲಿ ಎಲ್ಲರೂ ಪಾಲ್ಗೊಂಡಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಬೆಲೆ ಬರುತ್ತದೆ. ಮತದಾನದಿಂದಾಗಿ ತಮ್ಮ ಸಮರ್ಥ ಪ್ರತಿನಿಧಿಯನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. 18 ವರ್ಷ ಮೇಲ್ಪಟ್ಟವರೆಲ್ಲರೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ಆಡಳಿತ ಕುಲಸಚಿವೆ ಸುರೇಖಾ ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮತದಾನದ ಜಾಗೃತಿ ಮೂಡಿಸುವುದು ತುರ್ತಾಗಿದೆ. ಎಷ್ಟೋ ಜನ ಯುವಕರು ಜಾಗೃತೆಯ ಕೊರತೆಯಿಂದಾದ ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಯುವಕರು ವೋಟರ್ ಹೆಲ್ಪ್ ಲೈನ್ ಆಪ್ ನಲ್ಲಿ ತಾವಾಗಿಯೇ ನೋಂದಣಿ ಮಾಡಿಕೊಳ್ಳಬಹುದು. ವಿದ್ಯಾವಂತರು ಪ್ರತಿಯೊಬ್ಬರನ್ನೂ ಜಾಗೃತಗೊಳಿಸಿ, ಸರ್ವರೂ ಮತದಾನದ ಹಕ್ಕು ಪಡೆಯವಂತೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪರಮೇಶ್ವರ್ ನಾಯಕ್.ಟಿ, ಡಾ.ರವೀಂದ್ರನಾಥ್ ಗಬಾಡಿ ಹಾಗೂ ವಿಶ್ವವಿದ್ಯಾಲಯದ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಅಧ್ಯಕ್ಷತೆಯ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಅವರು ಅಭಿಪ್ರಾಯಪಟ್ಟರು.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

9 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

9 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

9 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

9 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

9 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

10 hours ago