ಬೀದರ.04.ಮಾರ್ಚ.25:- ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಕನಿಷ್ಠ 60ರಿಂದ 80 ಎಕರೆ ಸರ್ಕಾರಿ ಭೂಮಿಯನು ಉಚಿತವಾಗಿ ನೀಡಲು ಜಿಲ್ಲಾಧಿಕಾರಿಗೆ ಎಪಿಎಂಸಿ ಕಾರ್ಯದರ್ಶಿ ಪತ್ರ ಬರೆದಿದ್ದಾರೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮಂಗಳವಾರ ವಿಧಾನಪರಿಷತ್ತಿಗೆ ತಿಳಿಸಿದ್ದಾರೆ.
ಪ್ರಸ್ತುತ ಬೀದರ್ ಎಪಿಎಂಸಿ 39 ಎಕರೆ 28 ಗುಂಟೆ ಭೂಮಿ ಹೊಂದಿದ್ದು, ಈಗಾಗಲೇ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇನ್ನೂ ಎಪಿಎಂಸಿ ವಹಿವಾಟು ವಿಸ್ತರಣೆ ಮಾಡಲು ಸ್ಥಳಾವಕಾಶದ ಕೊರತೆ ಇರುವ ಕಾಣ ಬೀದರ್ ಸುತ್ತಮುತ್ತ 80 ಎಕರೆ ಸರ್ಕಾರದ ಭೂಮಿ ಒದಗಿಸಲು ಕೋರಲಾಗಿದೆ ಎಂದು ಸಚಿವರು ಶಾಸಕ ಭೀಮ್‍ರಾವ್ ಬಸವರಾಜ ಪಾಟೀಲ್ ಅವರ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧಿಸೂಚಿತ ಕೃಷಿ ಉತ್ಪನ್ನಗಳ ಮಾರುಕಟ್ಟೆ ಪ್ರಾಂಗಣದ ವಿಸ್ತರಣೆಗಾಗಿ ಅನುಮೋದಿತ ದದ ಪ್ರತಿಶತ 50ರ ರಿಯಾಯಿತಿ ದರದಲ್ಲಿ ನೂರು ಎಕರೆ ಭೂಮಿ ಮಂಜೂರು ಮಾಡುವಂತೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಕೋರಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಬೀದರ್ ಜಿಲ್ಲೆಯ ವ್ಯಾಪ್ತಿಯಲ್ಲಿ ಬೀದರ್, ಔರಾದ್ (ಬಾ), ಹುಮನಾಬಾದ್, ಬಸವಕಲ್ಯಾಣ ಮತ್ತು ಭಾಲ್ಕಿಯಲ್ಲಿ ಎಪಿಎಂಸಿಗಳು ಕಾರ್ಯನಿರ್ವಹಿಸುತ್ತಿವೆ. ಔರಾದ್ ಎಪಿಎಂಸಿ 45 ಎಕರೆ, ಹುಮನಾಬಾದ್ 16 ಎಕರೆ 15 ಗುಂಟೆ, ಬಸವಕಲ್ಯಾಣ 16 ಎಕರೆ 8 ಗುಂಟೆ ಹಾಗೂ ಭಾಲ್ಕಿ ಎಪಿಎಂಸಿ 36 ಎಕರೆ 37 ಗುಂಟೆ ಭೂಮಿ ಹೊಂದಿದ್ದು, ಈ ಮಾರುಕಟ್ಟೆಗಳಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸ್ಥಳಾವಕಾಶದ ಕೊರತೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…