ಬೀದರ.15.ಫೆ.25:- ಬೀದರ್ ನಗರದ ಮುಖ್ಯ ಶಾಖಾ ಎಸ್‌ಬಿಐ ಬ್ಯಾಂಕ್‌ನ ಎಟಿಎಂಗೆ ತುಂಬಲು ತಂದಿದ್ದ 94 ಲಕ್ಷ ರೂಪಾಯಿ ದರೋಡೆ ಹಾಗೂ ಓರ್ವ ಸಿಬ್ಬಂದಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳ ಮಾಹಿತಿಯನ್ನು ಬೀದರ್ ಜಿಲ್ಲಾ ಪೊಲೀಸ್ ಪ್ರಕಟಿಸಿದೆ.
ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ರೂ.5 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸರು ಘೋಷಣೆ ಮಾಡಿದ್ದಾರೆ.
ಒಂದು ತಿಂಗಳು ಕಳೆದರೂ ಆರೋಪಿಗಳ ಪತ್ತೆಯಾಗದ ಹಿನ್ನೆಲೆಯಲ್ಲಿ ಈ ಬಹುಮಾನವನ್ನು ಘೋಷಣೆ ಮಾಡಲಾಗಿದೆ.
ಇಬ್ಬರು ಆರೋಪಿಗಳಾದ ಅಮನಕುಮಾರ್ ಸಿಂಗ್ ಹಾಗೂ ಅಲೋಕ್ ಕುಮಾರ್ ಸುಳಿವಿಗೆ ಬಹುಮಾನವನ್ನು ಘೋಷಿಸಲಾಗಿದೆ.
ಕಳೆದ ಜ.16 ರಂದು ಬೈಕ್ ಮೇಲೆ ಬಂದ ಇಬ್ಬರು ದರೋಡೆಕೋರರು ಗುಂಡು ಹಾರಿಸಿ ಹಣವನ್ನು ದೋಚಿ ತೆಲಂಗಾಣದತ್ತ ಎಸ್ಕೇಪ್ ಆಗಿದ್ದರು.
ಅಲ್ಲಿಂದಲೂ ಖದೀಮರು ಪರಾರಿಯಾಗಿದ್ದರು. ಹಣ ದೋಚುವಾಗ ಘಟನೆಯಲ್ಲಿ ಓರ್ವ ಸಿಬ್ಬಂದಿಯನ್ನು ಗುಂಡಿಕ್ಕಿ ಕೊಂದಿದ್ದರು. ಇನ್ನೋರ್ವ ಸಿಬ್ಬಂದಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.
ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ರೂ.5 ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ.
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…