ಬೆಂಗಳೂರು.17.ಮಾರ್ಚ.25:- ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಶಿಕ್ಶಣ ಮತ್ತು ಉದ್ಯಮ ಕ್ಷೇತ್ರದ ನಡುವಿನ ಅಂತರ ಕಡಿಮೆ ಮಾಡಲು ಬೆಂಗಳೂರು ವಿಶ್ವವಿದ್ಯಾಲಯವು ಭಾರತೀಯ ಕೈಗಾರಿಕಾ ಮಹಾ ಒಕ್ಕೂಟದ (ಸಿಐಐ) ಜೊತೆಗೆ MOU ವಪಂದ್.
ಈ ಒಡಂಬಡಿಕೆಯ ಭಾಗವಾಗಿ ವಿಶ್ವವಿದ್ಯಾಲಯವು ಪ್ರಸ್ತುತ ಉದ್ಯೋಗ ಮಾರುಕಟ್ಟೆಯ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲು ‘ಉದ್ಯಮ ಆಧಾರಿತ ಸರ್ಟಿಫಿಕೇಟ್ ಕೋರ್ಸ್’ಗಳನ್ನು ಆರಂಭಿಸುತ್ತಿದೆ.
ಈ ಕೋರ್ಸ್‌ಗಳು ಹಣಕಾಸು, ಅಕೌಂಟ್ಸ್, ಕಾರ್ಪೋರೇಟ್ ಆಡಳಿತ, ಮಾನವ ಸಂಪನ್ಮೂಲ ಸೇರಿದಂತೆ ಉದ್ಯಮ ಕ್ಷೇತ್ರದ ಹಲವು ಪ್ರಮುಖ ವಿಷಯಗಳ ಮೇಲೆ ಕೇಂದ್ರಿಕೃತವಾಗಿರುತ್ತವೆ. ಈ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ಮತ್ತು ಉದ್ಯೋಗಮುಖಿ ಕೌಶಲ್ಯಗಳ ಕುರಿತು ತರಬೇತಿ ನೀಡಲಾಗುತ್ತದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಲಪತಿ ಜಯಕರ ಎಸ್.ಎಂ, ಕುಲಸಚಿವ ಶೇಕ್ ಲತೀಫ್ ಮತ್ತು ಸಿಐಐ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸೌಗತ ರಾಯ್ ಚೌಧರಿ ಅವರು ಒಡಂಬಡಿಕೆಗೆ ಸಹಿ ಹಾಕಿದರು.
ನಂತರ ಮಾತನಾಡಿದ ಕುಲಪತಿ ಜಯಕರ್ ಉದ್ಯಮ ವಲಯ, ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ರೂಪಿಸುವ ದೃಷ್ಟಿಯಲ್ಲಿ, ಈ ಒಪ್ಪಂದ ಪ್ರಮುಖ ಹೆಜ್ಜೆಯಾಗಿದೆ. ಶಿಕ್ಷಣ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ಇದು ಹಲವು ಬದಲಾವಣೆಗಳಿಗೆ ಕಾರಣವಾಗಲಿದೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕುಲಸಚಿವ (ಮೌಲ್ಯಮಾಪನ) ಶ್ರೀನಿವಾಸ್ ಸಿ. ಕಾನೂನು ನಿಕಾಯದ ಡೀನ್ ಪ್ರೊ. ಸುದೇಶ್ ವಿ. ಸೇರಿದಂತೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…