ಬೆಂಗಳೂರು.04.ಜುಲೈ.25:- ವಿಶ್ವ ವಿದ್ಯಾಲಯದಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ಮಾನ್ಯತೆ ಪಡೆದ ವಿವಿಯಿಂದ ಪದವಿ, ಸ್ನಾತಕೋತ್ತರ ಪದವಿ ಪೂರೈಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಜು.8ರ ಒಳಗೆ ಅರ್ಜಿಯನ್ನು ದಾಖಲಿಸಬಹುದಾಗಿದೆ.
ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾ ಸಕ ಹುದ್ದೆಗೆ ಇಲ್ಲಿದೆ ಹೆಚ್ಚಿನ ವಿವರ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು.
ವಿದ್ಯಾರ್ಹತೆ: ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.
ವಯೋಮಿತಿ : ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ :ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ: ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ನಿಗದಿತ ಅರ್ಜಿ ಪಡೆದು ಅದರ ಜೊತೆಗೆ ಅಗತ್ಯವಿರುವ ದಾಖಲಾತಿ ಪ್ರಮಾಣ ಪತ್ರದೊಂದಿಗೆ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕಿದೆ.
ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಕಳುಹಿಸಬೇಕಿದ್ದು, ಬೆಂಗಳೂರು ವಿವಿಯ ಅಧಿಕೃತ ಜಾಲತಾಣ bangaloreuniversity.karnataka.gov.in ಕ್ಕೆ ಭೇಟಿ ನೀಡಿ ಅರ್ಜಿ ಪಡೆಯಬಹುದು. ಈ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 8. ರೊಳಗೆ ಪ್ರಿನ್ಸಿಪಲ್, ಕಾನೂನು ವಿವಿ ಕಾಲೇಜ್, ಬೆಂಗಳೂರು ವಿವಿ, ಜ್ಞಾನ ಭಾರತಿ ಕ್ಯಾಂಪಸ್, ಬೆಂಗಳೂರು 560056ಕ್ಕೆ ವಿಳಾಸಕ್ಕೆ ಕಳುಹಿಸಬೇಕು.
