ಬೀದರ.15.ಜೂನ್.25:- ಬೀದರ್ ಜಿಲ್ಲೆಯ ರೈತರ ಬೇಡಿಕೆಗೆ ಅನುಗುಣವಾಗಿ ಸೋಯಾಬೀನ್ ಬಿತ್ತನೆ ಬೀಜ ಪೂರೈಕೆ ಮಾಡಲು ಕ್ರಮ ವಹಿಸಲಾಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.
ಈ ಬಾರಿ ವಾಡಿಕೆಗಿಂತಲೂ ಉತ್ತಮ ಮಳೆಯಾಗಿರುವ ಕಾರಣ ಸೋಯಾಬಿನ್ ಬಿತ್ತನೆ ಬೀಜಕ್ಕೆ ಬೇಡಿಕೆ ಹೆಚ್ಚಾಗಿದೆ. ಪ್ರಸಕ್ತ ಸಾಲಿನಲ್ಲಿ 102500 ಕ್ವಿಂಟಾಲ್ ಸೋಯಾಬೀನ್ ಬಿತ್ತನೆ ಬೀಜ ಮಂಜೂರಾಗಿದ್ದು, ಈಗಾಗಲೇ 87500 ಕ್ವಿಂಟಾಲ್ ವಿತರಣೆ ಮಾಡಲಾಗಿದೆ. 15000 ಕ್ವಿಂಟಾಲ್ ಸೋಯಾಬೀನ್ ಬಿತ್ತನೆ ಬೀಜ ಬೀದರ್ ಗೆ ರವಾನೆ ಆಗಿದ್ದು 2-3 ದಿನಗಳಲ್ಲಿ ರೈತರಿಗೆ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಜಿಲ್ಲೆಯಲ್ಲಿ 112000 ಕ್ವಿಂಟಾಲ್ ಸೋಯಾಬಿನ್ ಬಿತ್ತನೆ ಬೀಜಗಳ ವಿತರಣೆ ಮಾಡಲಾಗಿತ್ತು. ಈ ಬಾರಿ ಉತ್ತಮ ಪೂರ್ವ ಮುಂಗಾರು ಮಳೆಯಿಂದ ಬೇಡಿಕೆ ಹೆಚ್ಚಾಗಿದೆ.
ಹೀಗಾಗಿ ನಿನ್ನೆ ಯಾದಗಿರಿಯಲ್ಲಿ ನಡೆದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗೆ ಈ ಸಂಬoಧ ಮನವಿ ಸಲ್ಲಿಸಿದ್ದು, 15000 ಕ್ವಿಂಟಾಲ್ ಸೋಯಾಬೀನ್ ಬಿತ್ತನೆ ಬೀಜವನ್ನು ಮಾರುಕಟ್ಟೆಯಲ್ಲಿ ಖರೀದಿಸಿ ಹಚ್ಚುವರಿಯಾಗಿ ವಿತರಿಸಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೀಘ್ರವೇ ಹೆಚ್ಚುವರಿ ಬಿತ್ತನೆ ಬೀಜವೂ ಬೀದರ್ ಗೆ ಆಗಮಿಸಲಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ವಿತರಿಸಲಾಗುವುದು. ಯಾರೂ ಆತಂಕ ಪಡುವುದು ಬೇಡ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…