ಔರಾದ್.30.ಏಪ್ರಿಲ್.25:- ಇಂದು ಬೆಲ್ದಾಳ ಗ್ರಾಮದಲ್ಲಿ ಭೀಮ-ಬಸವ ಜಯಂತಿಯನ್ನು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು NSYF ರಾಜ್ಯ ಸಂಚಾಲಕರಾದ ಶ್ರೀ ಶಿವಕುಮಾರ ಕಾಂಬಳೆ ಉದ್ಘಾಟಿಸಿದರು. ಧ್ವಜಾರೋಹಣವನ್ನು ಚಿಂತಾಕಿ ಪೊಲೀಸ್ ಆರಕ್ಷಕರಾದ ಸಿದ್ಧಲಿಂಗ ಸರ್ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಶರಣ ಶಿಲವಂತ, ಮೊಗಲಪ್ಪಾ ಬೆಲ್ದಾಳ, ದಿನೇಶ ಶಿಂದೆ, ಸುಂದರ ಮೇತ್ರೆ, ಮಾಣಿಕ ಮೇತ್ರೆ, ಧನರಾಜ ಮೇತ್ರೆ, ಮನೋಹರ, ರಾಮಚಂದ್ರ, ಸೋಪಾನ, ನರಸಿಂಗ ಮತ್ತು ಸಂದೀಪ್ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು.
ಉದ್ಘಾಟನಾ ಭಾಷಣದಲ್ಲಿ ಶಿವಕುಮಾರ ಕಾಂಬಳೆ ಮಾತನಾಡುತ್ತಾ, “ದಲಿತರಿಗೆ ಸಮಾಜದ ಮುಖ್ಯವಾಹಿನಿಗೆ ತಂದವರು ಬಸವಣ್ಣ. ಅವರ ಸಂಘರ್ಷದ ಫಲವಾಗಿ ನಮ್ಮ ನಾಡಿನಲ್ಲಿ ಶಾಂತಿ, ಸಮಾನತೆ ಮತ್ತು ನ್ಯಾಯ ಸ್ಥಾಪಿತವಾಗಿದೆ,” ಎಂದು ಹೇಳಿದರು. ಅವರು ಮುಂದುವರೆದು, “ಬಸವಣ್ಣನವರ ವಚನಗಳಲ್ಲಿ ವ್ಯಕ್ತವಾದ ಧ್ಯೇಯಗಳು, ಭಾರತ ಸಂವಿಧಾನದಲ್ಲಿಯೂ ಬಾಬಾ ಸಾಹೇಬ ಅಂಬೇಡ್ಕರ್ ಅವರು ರೂಪಿಸಿದ ಮೌಲ್ಯಗಳಲ್ಲಿ ಕಂಡುಬರುತ್ತವೆ,” ಎಂದು ಹೇಳಿದರು.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…