ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆಕ್ರಮ ವಹಿಸಿ-ಸಚಿವ ಈಶ್ವರ ಖಂಡ್ರೆ

ಬೀದರ.01.ಮಾರ್ಚ್.25: ಜಿಲ್ಲೆಯ 867 ಜನವಸತಿ ಪ್ರದೇಶಗಳಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಮುಂಜಾಗೃತಾ ಕ್ರಮ ವಹಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ನೀರಿನ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಸಧ್ಯ ಬೇಸಿಗೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸುವಂತೆ ಸಚಿವ ಖಂಡ್ರೆ ಸೂಚನೆ ನೀಡಿದರು.


ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಈಗಾಗಲೇ 632 ಕಾಮಗಾರಿಗಳು ಪೂರ್ಣಗೊಂಡಿರುವ ಬಗ್ಗೆ ಅಧಿಕಾರಿಗಳಾದ ಮಾಹಿತಿ ಪಡೆದರು. ಶಾಶ್ವತ ನೀರಿನ ವಲಯ ಬಳಸಿ ನೀರು ಸರಬರಾಜು ಯೋಜನೆ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.


ಜಿಲ್ಲೆಯಲ್ಲಿ ಸಾರ್ವಜನಿಕರು ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ವೈದ್ಯಾಧಿಕಾರಿಗಳು ಪ್ರಮಾಣಿಕ ಸೇವೆ ಸಲ್ಲಿಸುವಂತೆ ಸಚಿವರು ಸೂಚಿಸಿದರು.


ಈವರೆಗೆ ಬಾಣಂತಿಯರು ಮರಣ ಹೊಂದಿರುವ ಬಗ್ಗೆ ಮಾಹಿತಿ ಪಡೆದ ಸಚಿವರು ಜಿಲ್ಲೆಯಲ್ಲಿ ಗರ್ಭಿಣಿ ಹಾಗೂ ಹೆರಿಗೆ ಪ್ರಕರಣಗಳಲ್ಲಿ ಸೂಕ್ತ ಔಷಧೋಪಚಾರ ಹಾಗೂ ಚಿಕಿತ್ಸೆ ನೀಡುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರುಗಡೆ ಅವರಿಗೆ ಸೂಚಿಸಿದರು.


ಬ್ರಿಮ್ಸ್‍ನಲ್ಲಿ ಅವ್ಯವಸ್ಥೆ ಸರಿಪಡಿಸಲು ಡಿ.ಎಚ್.ಓ., ಜಿಲ್ಲಾ ಶಸ್ತ್ರಚಿಕಿತ್ಸಕ ಹಾಗೂ ಬ್ರಿಮ್ಸ್ ನಿರ್ದೇಶಕರು ಚರ್ಚಿಸಿ ಸಹಕಾರದಿಂದ ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ಕ್ರಮ ವಹಿಸುವಂತೆ ತಿಳಿಸಿದರು. ಮಾರ್ಚ ಒಳಗಾಗಿ ಕ್ಯಾಟ್‍ಲ್ಯಾಬ್ ಆರಂಭಿಸುವಂತೆ ಸೂಚಿಸಿದರು.

ಡಯಾಲಿಸಿಸ್ ರೋಗಿಗಳಿಗೆ ಬ್ರಿಮ್ಸ್‍ನಲ್ಲಿ ಕಾಯುವ ಸ್ಥಿತಿ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಇನ್ನೆರಡು ಡಯಾಲೇಸಿಸ್ ಯಂತ್ರ ಬೇಕಿದ್ದಲ್ಲಿ ಕೆಕೆಆರ್‍ಡಿಬಿ ಅನುದಾನದಡಿ ನೀಡಲಾಗುವುದು. ಆದರೆ ಡಯಾಲೇಸಿಸ್ ರೋಗಿಗಳಿಗೆ ಸಮಸ್ಯೆಯಾಗದಂತೆ ವೈದ್ಯರು 3 ಶಿಫ್ಟ್‍ಗಳಲ್ಲಿ ಚಿಕಿತ್ಸೆ ನೀಡುವಂತೆ ಸಚಿವರು ಸೂಚಿಸಿದರು. ಅಲ್ಲದೇ 10 ದಿನದೊಳಗೆ ಕ್ರಮ ವಹಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳುವ ಬಗ್ಗೆಯೂ ತಿಳಿಸಿದರು.


ಕ್ಯಾನ್ಸರ್ ಪೀಡಿತ ರೋಗಿಗಳು ಜಿಲ್ಲೆಯ ಹೊರಗೆ ಕಿಮೋಥೆರೆಪಿ ಪಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿರುವ ಬಗ್ಗೆ ಸಚಿವರು ಪ್ರಸ್ತಾಪಿಸಿದರು. ಬ್ರಿಮ್ಸ್‍ನಲ್ಲಿ ಈಗಾಗಲೇ ಡೇಕೇರ್ ಕೀಮೋ ಕೇಂದ್ರ ಆರಂಭಗೊಂಡಿರುವ ಬಗ್ಗೆ ಹೆಚ್ಚಿನ ಪ್ರಚಾರ ನೀಡುವಂತೆ ಡಾ.ನಿರಗುಡೆ ಅವರಿಗೆ ಸೂಚಿಸಿದರು.

ಬ್ರಿಮ್ಸ್‍ನ ವಾರ್ಡನಲ್ಲಿ ಈವರೆಗೆ 96 ಜನ ಕೀಮೋ ಥೆರೆಪಿ ಪಡೆಯುತ್ತಿರುವ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು.
ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಪ್ತಪಡಿಸಿದ ಸಚಿವರು ಈ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ವರ್ಷಕ್ಕೆ 300 ಅಪಘಾತಗಳು ಆಗುತ್ತಿರುವ ಬಗ್ಗೆ ಆರ್.ಟಿ.ಓ. ಸಚಿವರ ಗಮನಕ್ಕೆ ತಂದರು. ಕುಡಿದು ವಾಹನ ಚಲಾಯಿಸುವವರ ಎಷ್ಟು ಪರವಾನಿಗೆ ರದ್ದು ಮಾಡಿದ್ದಿರಿ ಎಂದು ಸಚಿವರು ಕೇಳಿದರು.

ಜಿಲ್ಲೆಯ ಎಲ್ಲ ವಾಹನಗಳಿಗೆ ರೇಡಿಯಂ ಸೈಕಲ್ ಕಡ್ಡಾಯವಾಗಿ ಅಂಟಿಸುವಂತೆ ಸೂಚಿಸಿದರು. ಈಲ್ಲೆಯ ಎಲ್ಲ ಪ್ರಮುಖ ರಸ್ತೆಗಳಲ್ಲಿ, ವೃತ್ತಗಳಲ್ಲಿ ಉತ್ತಮ ಸಿಸಿ ಟಿವಿ ಅಳವಡಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.


ನೌಬಾದ್, ನಿಲಂಗಾ ರಸ್ತೆ ಹಾಗೂ ಬೀದರ್ ಹುಮನಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವೆಡೆ ತಗ್ಗುಗಳು ಹಾಗೂ ಉಬ್ಬುಗಳು ಕಂಡು ಬಂದಿದ್ದು ಅಪಘಾತ ಸಂಭವಿಸಬಹುದಾಗಿದೆ, ತಕ್ಷಣ ರಿಪೇರಿ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಇಂಜಿನೀಯರಗೆ ಸಚಿವರು ಸೂಚಿಸಿದರು.


ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಗೊಳಪಡುವ ವಸತಿ ನಿಲಯಗಳು, ವಸತಿ ಶಾಲೆಗಳಿಗೆ ಕಟ್ಟಡ ಅಥವಾ ನಿವೇಶನ ಕೊರತೆ ಇರುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ವರದಿ ನೀಡಬೇಕು. ಹಿಂದುಳಿದ, ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ ಪರಿಶಿಷ್ಟ ಪಂಗಡ ಅಭಿವೃದ್ಧಿ ಹಾಗೂ ಇತರೇ ಇಲಾಖೆಗಳು ಮುಂಬರುವ ಸಾಲಿನಲ್ಲಿ ಯಾವುದೇ ವಿದ್ಯಾರ್ಥಿಗೆ ಶಿಕ್ಷಣಕ್ಕೆ ಅನಾನುಕೂಲವಾಗದಂತೆ ವಸತಿ ನಿಲಯಕ್ಕೆ ಪ್ರಾವೇಶ ದೊರಕುವ ನಿಟ್ಟಿನಲ್ಲಿ ಜಿಲ್ಲೆಗೆ ಅಗತ್ಯವಿರುವ ವಸತಿ ನಿಲಯದ ನಿವೇಶನ ಹಾಗೂ ಕಟ್ಟಡಗಳ ವಿವರವನ್ನು ನೀಡಿದಲ್ಲಿ ಮುಂಬರುವ ಕ್ಯಾಬಿನೆಟ್‍ನಲ್ಲಿ ಚರ್ಚಿಸುವುದಾಗಿ ಸಚಿವರು ತಿಳಿಸಿದರು.

ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ಕುರಿತು ದೂರುಗಳು ಕೇಳಿ ಬಂದಿದ್ದು ಅಧಿಕಾರಿಗಳು ಹಾಗೂ ವಾರ್ಡನ ತಕ್ಷಣ ಕ್ರಮ ಕೈಗೊಳ್ಳುವಂತೆ ಸಚಿವರು ತಿಳಿಸಿದರು.


ಜಿಲ್ಲೆಯಲ್ಲಿ ಬಾಕಿಯಿರುವ ಎಲ್ಲ ಅಂಗನವಾಡಿ ಕಟ್ಟಡಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.


ಜಿಲ್ಲೆಯ ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಹಾಗೂ ಸ್ಥಾನವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕೆಂದು ಸೂಚಿಸಿದರು.


ಹೊರ ಜಿಲ್ಲೆಯ ಮೀನುಗಾರರು ಸ್ಥಳೀಯ ಜಲಾಶಯಗಳಲ್ಲಿ ಮೀನುಗಾರಿಕೆ ನಡೆಸುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ ವಹಿಸುವಂತೆ ಹಾಗೂ ಸ್ಥಳೀಯ ಮೀನುಗಾರರ ಸಂಘ ನಿರ್ಮಿಸಿ ಸ್ಥಳೀಯರಿಗೆ ಅನುಕುಲವಾಗುವಂತೆ ಕ್ರಮ ವಹಿಸುವಂತೆ ಸಚಿವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.


ಈ ಸಭೆಯಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಯುವಜನ ಸೇವೆ ಇಲಾಖೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ.ರಂದೀಪ, ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಹುಮನಾಬಾದ ಶಾಸಕರಾದ ಡಾ.ಸಿದ್ಧಲಿಂಗ ಪಾಟೀಲ, ಬಸವಕಲ್ಯಾಣ ಶಾಸಕರಾದ ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ ಪಾಟೀಲ, ಡಾ.ಚಂದ್ರಶೇಖರ ಪಾಟೀಲ, ನಗರಸಭೆ ಅಧ್ಯಕ್ಷರಾದ ಎಂ.ಡಿ.ಗೌಸ್, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಂ.ಎಂ.ವಾನತಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Share
Published by
prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

11 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

20 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

1 day ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

1 day ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

1 day ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago