ಬೇಸಿಗೆ ರಜೆಯನ್ನು ಆಟೋಟಗಳಲ್ಲಿ ಕಳೆಯುವ ಮಕ್ಕಳು,

ಬೆಂಗಳೂರು.22.ಏಪ್ರಿಲ್.25:- ಬೇಸಿಗೆ ರಜೆಯನ್ನು ಆಟೋಟಗಳಲ್ಲಿ ಕಳೆಯುವ ಮಕ್ಕಳು, ಈಗ ಬಿಡುವಿನ ಅವಧಿಯನ್ನು ಮನರಂಜನೆಯ ಜೊತೆ ಕಲಿಕೆಗೂ ಬಳಸಿಕೊಳ್ಳುತ್ತಿದ್ದಾರೆ. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು, ಹವ್ಯಾಸಗಳನ್ನು ರೂಢಿಸಿಕೊಳ್ಳಲು ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳಲ್ಲಿ ಆಯೋಜಿಸುತ್ತಿರುವ ‘ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ’ಗಳು ನೆರವಾಗುತ್ತಿವೆ. 

ಬೇಸಿಗೆ ಶಿಬಿರವು ಮಕ್ಕಳಲ್ಲಿ ಪರಿಸರ ಕಾಳಜಿ, ಸಾಮಾಜಿಕ ತಿಳಿವಳಿಕೆ, ವಿಜ್ಞಾನ ಮತ್ತು ಇತಿಹಾಸದಂತಹ ವಿಷಯಗಳನ್ನು ಕಲಿಯುವ ಅವಕಾಶ ಕಲ್ಪಿಸುತ್ತಿದೆ. ಅಲ್ಲದೆ ಅವರಲ್ಲಿ ನಾಯಕತ್ವ ಮನೋಭಾವ ಬೆಳೆಸುವುದು, ಸಂವಹನ ಸಾಮರ್ಥ್ಯ ವೃದ್ಧಿ, ಸೃಜನಶೀಲತೆ, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳನ್ನು ನಡೆಸುತ್ತಿವೆ.

ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲ್ಲೂಕಿನ ಹಾವಂಜೆ ಗ್ರಾಮ ಪಂಚಾಯತಿಯು ಈ ದಿಸೆಯಲ್ಲಿ ಗಮನಾರ್ಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಬೇಸಿಗೆ ಶಿಬಿರವು ತನ್ನ ಬೌದ್ಧಿಕ ವಿಕಾಸಕ್ಕೆ ಹೇಗೆ ನೆರವಾಗಿದೆ ಎಂಬುದನ್ನು ಉಪ್ಪೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಕ್ಷಾ ವಿವರಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಬೇಸಿಗೆ ಅವಧಿಯಲ್ಲಿ ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ಹಿನ್ನಡೆಯಾಗಬಾರದು ಹಾಗೂ ಈ ರಜೆಯು ಸದ್ಬಳಕೆಯಾಗಬೇಕು ಎನ್ನುವುದು ಬೇಸಿಗೆ ಶಿಬಿರದ ಮೂಲ ಉದ್ದೇಶ. ಇದನ್ನು ಗ್ರಾಮೀಣ ಮಕ್ಕಳು ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ನಮ್ಮ ಆಶಯ ಸಫಲವಾಗುತ್ತಿರುವ ಸಂತಸದ ಸಂಗತಿ.  

ಗ್ರಾಮ ಪಂಚಾಯತಿಗಳು ಇಂದು ಗ್ರಾಮಾಡಳಿತಕ್ಕಷ್ಟೇ ಸೀಮಿತವಾಗಿಲ್ಲ. ಇವು ಹಳ್ಳಿಗಳು ಮತ್ತು ಗ್ರಾಮೀಣರ ಸಮಗ್ರ ಅಭ್ಯುದಯಕ್ಕೆ ವೇದಿಕೆ ಕಲ್ಪಿಸುತ್ತಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಧ್ಯೇಯಕ್ಕೆ ಪೂರಕವಾಗಿ ಪಂಚಾಯತಿಗಳು ಆಬಾಲವೃದ್ಧರವರೆಗೆ ಜ್ಞಾನಾರ್ಜನೆಯ ಕೇಂದ್ರಗಳಾಗಿ ಪರಿವರ್ತನೆ ಹೊಂದುತ್ತಿದೆ. ಗ್ರಾಮೀಣ ಜನತೆಯ, ಮುಖ್ಯವಾಗಿ ಭವಿಷ್ಯದ ಪ್ರಜೆಗಳ ಬೌದ್ಧಿಕ ವಿಕಸನಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಗುರಿ.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

4 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

4 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

5 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

5 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

6 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

15 hours ago