ಬೋಧನಾ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ನೇಮಕ ಸಚಿವ ದಿನೇಶ್ ಗುಂಡೂರಾವ್

ಶಿವಮೊಗ್ಗದ.30.ಮೇ .25:- ಸರ್ಕಾರಿ ಆಯುರ್ವೇದ ವೈದ್ಯಕೀ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಆಸ್ಪತ್ರೆಗೆ ಸ್ಟಾಫ್ನರ್ಸ್ ನೇಮಕ ಸೇರಿದಂತೆ ವಿವಿಧ ಖಾಲಿ ಹುದ್ದೆ ಗಳನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಸಿಬ್ಬಂದಿ ನೇಮಕದ ಭರವಸೆಯನ್ನು ನೀಡಿದ್ದಾರೆ.

ಬುಧವಾರ ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಭೇಟಿ ನೀಡಿ, ಇದೇ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ಪ್ರಶಾಂತ ಕೆಕೊಡ ಮಾತನಾಡಿ, ಕಾಲೇಜಿನಲ್ಲಿ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಸೇರಿದಂತೆ ಬೋಧಕ ಸಿಬ್ಬಂದಿಗಳ ಕೊರತೆ ಇದೆ. ಆದ ಕಾರಣ ಬಿಎಎಂಎಸ್ ವಿದ್ಯಾರ್ಥಿಗಳ ಮಂಜೂರು ಸೀಟು 60 ಇದ್ದು, ದಾಖಲು ಸಂಖ್ಯೆ 33 ಕ್ಕೆ ಇಳಿಕೆಯಾಗಿದೆ.

ಆಯುರ್ವೇದ ಬೋಧನಾ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಕೊರತೆ ಸಹ ಇದ್ದು, ಇವರನ್ನು ನೇಮಕ ಮಾಡುವಂತೆ ಹಾಗೂ ಹೊಸದಾಗಿ ಪಿಜಿ ಕೋರ್ಸ್ ಆರಂಭಿಸಲು ಜಾಗದ ಅವಶ್ಯಕತೆ ಇದ್ದು, ಸ್ಥಳಾವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.

ವಿದ್ಯಾರ್ಥಿಗಳು ಮಾತನಾಡಿ, ಬಾಲಕರ ಹಾಸ್ಟೆಲ್ ಇಲ್ಲ. ಆದ್ದರಿಂದ ಸಮಸ್ಯೆಯಾಗುತ್ತಿದೆ. ಶೀಘ್ರದಲ್ಲಿ ಹಾಸ್ಟೆಲ್ಗೆ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಹಾಗೂ ಕ್ಯಾಂಟಿನ್, ವಸ್ತು ಸಂಗ್ರಹಾಲಯ, ಆಡಿಟೋರಿಯಂ, ಇಂಟರ್ನ್ಗಳಿಗೆ ಸ್ಟೆöÊಫಂಡ್ ಹೆಚ್ಚಳ ಮಾಡುಂತೆ ಕೋರಿದರು. ಮತ್ತು ವಿದ್ಯಾರ್ಥಿ ವೇತನ ಪಡೆಯುವಲ್ಲಿ ಎಸ್‌ಎಸ್ಪಿ ಪೋರ್ಟಲ್ನಲ್ಲಿ ಸಮಸ್ಯೆ ಇದ್ದು ಸರಿಪಡಿಸುವಂತೆ ಮನವಿ ಮಾಡಿದರು.

ಸಚಿವರು ಪ್ರತಿಕ್ರಿಯಿಸಿ, ಬೋಧಕ ಸಿಬ್ಬಂದಿ, ಸ್ಟಾಫ್ ನರ್ಸ್ ನೇಮಕಾತಿ, ಪಿಜಿ ಕೋರ್ಸ್ ಆರಂಭಿಸಲು ಜಾಗ ನೀಡುವ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜಿಲ್ಲೆಯಲ್ಲಿ 35 ಆಯುಷ್ ಕೇಂದ್ರಗಳಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಈ ಕೇಂದ್ರಗಳಿಗೆ ಸಂಬಂಧಿಸಿದಂತೆ ಜಾರಿ ಮಾಡಲಾದ ಹೊಸ ಮಾರ್ಗಸೂಚಿಯನ್ನು ಆಯುಷ್ ಇಲಾಖೆ ಪಾಲನೆ ಮಾಡಬೇಕು ಎಂದರು. ಆಯುರ್ವೇದ ಆಸ್ಪತ್ರೆಗೆ ಹೆಚ್ಚುವರಿ ನೀರಿನ ಸಂಪರ್ಕ ಅಗತ್ಯವಿದ್ದು, ಶೀಘ್ರವೇ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸಹ ಶೀಘ್ರದಲ್ಲೇ ಪೂರೈಸಲಾಗುವುದು ಎಂದು ಭರವಸೆ ನೀಡಿದರು.

prajaprabhat

Recent Posts

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

36 minutes ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

1 hour ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

1 hour ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

2 hours ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

2 hours ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

2 hours ago