ಬ್ಯಾಂಕ್ ದರೋಡೆ ದಾಳಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವಶಿವಕುಮಾರನ್ನು ಭೇಟಿ-ಸಚಿವ ರಹೀಂ ಖಾನ.!


ಬೀದರ.23.ಜನವರಿ.25:- ಪೌರಾಡಳಿತ ಹಾಗೂ ಹಜ್ ಸಚಿವಾರದ ರಹಿಂ ಖಾನ್ ಅವರು ಜನವರಿ.16 ರಂದು ಬೀದರ್‌ನಲ್ಲಿ ಎಸ್‌ಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಭದ್ರತಾ ಸಿಬ್ಬಂದಿ ಶಿವಕುಮಾರ್ ಅವರನ್ನು ಹೈದರಾಬಾದ್‌ನ ಕೇರ್ ಆಸ್ಪತ್ರೆಯಲ್ಲಿ ಭೇಟಿಯಾದರು.


ಅವರು ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿAದ ಹೈದರಾಬಾದ್‌ಗೆ ಆಗಮಿಸಿದ ಅವರು ಕುಟುಂಬ ಸದಸ್ಯರನ್ನು ಮತ್ತು ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು ಮತ್ತು ಆರ್ಥಿಕ ಸಹಾಯವನ್ನು ನೀಡಿದರು. ಶಿವಕುಮಾರ್ ಈಗ ಅಪಾಯದಿಂದ ಪಾರಾಗಿದ್ದು, ಚಿಕಿತ್ಸಾ ವೆಚ್ಚದ ಬಗ್ಗೆ ಚಿಂತಿಸಬೇಡಿ ಎಂದು ಭರವಸೆ ನೀಡಿದ ಅವರು, ಶಿವಕುಮಾರ್ ಅವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಲ್ಲಿ ವಿನಂತಿಸಿದರು ಮತ್ತು ಅವರ ಆರೋಗ್ಯದ ಬಗ್ಗೆ ವಿವರವಾಗಿ ವಿಚಾರಿಸಿದರು.


ಗಾಯಾಳು ಶಿವಕುಮಾರ್ ಶೀಘ್ರ ಗುಣಮುಖರಾಗುವ ಭರವಸೆಯನ್ನು ವೈದ್ಯರು ನೀಡಿದ್ದಾರೆ. ದುರಂತಕ್ಕೆ ಕಾರಣರಾದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕುಟುಂಬ ಸದಸ್ಯರಿಗೆ ಭರವಸೆ ನೀಡಿದರು.

ಗಾಯಗೊಂಡವರು ಮತ್ತು ಮೃತರ ಕುಟುಂಬಗಳಿಗೆ ಸಕಾಲದಲ್ಲಿ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಅಪರಿಚಿತ ನಂಬರಗಳಿoದ ದೂರವಾಣಿ ಕರೆಗಳು ಬಂದಲ್ಲಿ
ಸ್ವೀಕರಿಸಬಾರದೆಂದು ಸಾರ್ವಜನಿಕರು, ಅಂಗನವಾಡಿ ಕಾರ್ಯಕರ್ತೆಯರಲ್ಲಿ ಮನವಿ

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

2 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

3 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

4 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

4 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

4 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

4 hours ago