ಬೀದರ.17.ಜನವರಿ.25:- ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಇಂದು ಬ್ಯಾಂಕ್ ದರೋಡೆ ಸಂದರ್ಭದಲ್ಲಿ ದರೋಡೆಕೋರರ ಗುಂಡೇಟಿಗೆ ಬಲಿಯಾದ ಬೆಮಲಖೇಡ ಗ್ರಾಮದ ಗಿರಿ ವೆಂಕಟೇಶ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಸರಕಾರದ ಬ್ಯಾಂಕ್ ಹಣವನ್ನು ಕಾಪಾಡುವ ನಿಟ್ಟಿನಲ್ಲಿ ಬಲಿಯಾದ ಗಿರಿ ವೆಂಕಟೇಶ ಕುಟುಂಬಕ್ಕೆ ಸರಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ದೊರಕಬೇಕಾದ ಎಲ್ಲ ಸಹಾಯ ಸವಲತ್ತುಗಳನ್ನು ದೊರಕಿಸಿಕೊಡಲಾಗುವುದೆಂದು ಹೇಳಿದರು. ಅಲ್ಲದೇ ಮುಖ್ಯಮಂತ್ರಿಗಳೊAದಿಗೆ ಈಗಾಗಲೇ ಚರ್ಚಿಸಲಾಗಿ ಕುಟುಂಬಕ್ಕೆ ಹೆಚ್ಚುವರಿಯಾಗಿ 10 ಲಕ್ಷ ರೂ.ಗಳನ್ನು ದೊರಕಿಸಲು ಕ್ರಮ ಕೈಗೊಳ್ಳಲಾಗುವುದು.
ಸಮಾಜ ಕಲ್ಯಾಣ ಇಲಾಖೆಯಿಂದ 8 ಲಕ್ಷ ರೂ. ಪರಿಹಾರ ಹಾಗೂ ಅವರ ತಾಯಿಗೆ 5 ಸಾವಿರ ಮಾಸಾಶನ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸಮಾಜ ಕಲ್ಯಾಣ ಇಲಾಖೆಯಡಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಲಾಗುವದು ಎಂದು ಸಚಿವರು ತಿಳಿಸಿದರು.
ಈಗಾಗಲೇ ಹೈದ್ರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ ಅವರ ಚಿಕಿತ್ಸೆ ವೆಚ್ಚ ಭರಿಸಲು ಸಹ ಕ್ರಮ ಕೈಗೊಳ್ಳಲಾಗುವುದೆಂದರು. ಸಮಾಜ ಕಲ್ಯಾಣ ಇಲಾಖೆಯಿಂದ ದೊರಬೇಕಾದ ಪರಿಹಾರ ಸಹಾಯಗಳನ್ನು ತಕ್ಷಣವೇ ಒದಗಿಸುವಂತೆ ಸ್ಥಳದಲ್ಲೇ ಉಪಸ್ಥಿತರಿದ್ದ ಉಪ ನಿರ್ದೇಶಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಹಾಗೂ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…