ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.05.ಮಾರ್ಚ.25:-  ರಾಜ್ಯದಲ್ಲಿ 2 ದಶಕದಿಂದ ಪ್ರೌಡಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (4)(5)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಪತ್ರಗಳಲ್ಲಿ 1978 ರಿಂದ 2003ರ ವರೆಗೆ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಾಧಿಕಾರಿಯು ರಾಜ್ಯದ 04 ವಿಭಾಗೀಯ ಕಛೇರಿಗಳ ಸಹ ನಿರ್ದೇಶಕರಾಗಿದ್ದು.

2003ನೇ ಸಾಲಿನಿಂದ ನೇಮಕಾತಿ ಪ್ರಾಧಿಕಾರಿಗಳು ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಾಗಿರುತ್ತಾರೆ. ಹಾಗೂ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಮುಂಬಡ್ತಿ ನೀಡುವ ಸಕ್ಷಮ ಪ್ರಾಧಿಕಾರಿಗಳು 35 ಶೈಕ್ಷಣಿಕ ಜಿಲ್ಲೆಗಳಾಗಿರುವುದರಿಂದ ಅನುಬಂಧ-1 ರಲ್ಲಿ ನೇರ ನೇಮಕಾತಿ & ಅನುಬಂಧ-2ರಲ್ಲಿ ಮುಂಬಡ್ತಿಗಳ ಮಾಹಿತಿಯನ್ನು ಈ ಕಛೇರಿಗೆ ಒದಗಿಸಲು ದಿನಾಂಕಗಳನ್ನು ನಿಗಧಿಪಡಿಸಿ ಆದೇಶಿಸಲಾಗಿದೆ.

ಅದರಂತೆ ನಿಗಧಿಪಡಿಸಿದ ದಿನಾಂಕಗಳಂದು ಸಹ ನಿರ್ದೇಶಕರು, ವಿಭಾಗೀಯ ಕಛೇರಿ/ಉಪನಿರ್ದೇಶಕರು ಶೈಕ್ಷಣಿಕ ಜಿಲ್ಲೆಗಳು/ಸಿಬ್ಬಂದಿಗಳು ಈ ಕಛೇರಿಗೆ ಭೇಟಿ ನೀಡಿ, ಅನುಬಂಧ-1 ರಲ್ಲಿ ನೇರ ನೇಮಕಾತಿ & ಅನುಬಂಧ-2 ರಲ್ಲಿ ಮುಂಬಡ್ತಿಗಳ ಮಾಹಿತಿಯನ್ನು ಕ್ರೂಢೀಕರಿಸಲು ಸ್ಪಷ್ಟಿಕರಣವನ್ನು ಪಡೆದಿರುತ್ತಾರೆ. ಯಾವುದೇ ವಿಭಾಗೀಯ ಕಛೇರಿಗಳು/ಜಿಲ್ಲೆಗಳು ಮಾಹಿತಿ ಸಲ್ಲಿಸಿರುವುದಿಲ್ಲ, ನೇರ ನೇಮಕಾತಿ ಮಾಹಿತಿಯನ್ನು 1984 ರಿಂದ ಮುಂಬಡ್ತಿಗಳನ್ನು 1978ರಿಂದ ಮಾಹಿತಿಯನ್ನು ಕ್ಯೂಢೀಕರಿಸಲು ಕಾಲವಕಾಶ ನೀಡುವಂತೆ ಕೋರಿಕೆಗಳನ್ನು ಸಲ್ಲಿಸಿರುತ್ತಾರೆ.

prajaprabhat

Recent Posts

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

1 hour ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

1 hour ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

2 hours ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

11 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

11 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

11 hours ago