ಬೀದರ: 09.ಜನವರಿ.25 :- ಬೀದರ ಜಿಲ್ಲೆಯ 2024-25ನೇ ಸಾಲಿಗೆ ಶೇ 75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರ ವ್ಯಕ್ತಿಗಳಿಗೆ ಇಲಾಖೆಯಿಂದ ಜಾರಿ ಇರುವ ಬ್ಯಾಟರಿ ಚಾಲಿತ ವಿಲ್ಹ್ಚೇರ ಯೋಜನೆಯಡಿ ಅರ್ಹರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯಲು ಆನ್‌ಲೈನ್
Suvidha Website URL https://suvidha.karnataka.gov.in ಪೋರ್ಟಲ್‌ನಲ್ಲಿ
ದಿನಾಂಕ: 21-01-2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆದಿರಬಾರದು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳ ವಿವರ: ವಿಕಲಚೇತನರ ಯು.ಡಿ.ಐ.ಡಿ ಕಾರ್ಡ್. ಬಿ.ಪಿ.ಎಲ್ ಪಡಿತರ ಚೀಟಿ. ಜಾತಿ ಮತ್ತು ಆದಾಯ ರೂ. 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು ಪ್ರಮಾಣ ಪತ್ರ. ತಶೀಲ್ದಾರರಿಂದ ವಾಸಸ್ಥಳ ಪ್ರಮಾಣ ಪತ್ರ. ಆಧಾರ ಕಾರ್ಡ್. ಸ್ವಯಂ ಘೋಷಣಾ ಪತ್ರ ಹಾಗೂ ಭಾವ ಚಿತ್ರ 02
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8073451071, 8970965959, ಎಲ್ಲಾ ತಾಲ್ಲೂಕ ಎಂ.ಆರ್.ಡಬ್ಲೂö್ಯ ಬೀದರ (9880801991), ಭಾಲ್ಕಿ (9741166275), ಬಸವಕಲ್ಯಾಣ ಹುಮನಾಬಾದ –(9611221445), (8432574070), ಔರಾದ ಬಿ (9611590832), (924231284) ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…