ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಯನ್ನು ವೀಕ್ಷಣೆ  ಮಾಜಿ ಕೇಂದ್ರ ಸಚಿವ ಭಗವಂತ

ಬೀದರ.15.ಏಪ್ರಿಲ್.25:- ರಾಷ್ಟ್ರೀಯ ಹೆದ್ದಾರಿ ಬೀದರ್-ಔರಾದ್ ನಡುವೆ ಕೌಠಾ ಸೇತುವೆ ಬಳಿ ನಿರ್ಮಿಸಲಾಗುತ್ತಿರುವ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಯನ್ನು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ  ವೀಕ್ಷಣೆ ಮಾಡಿದರು.

ರಾಷ್ಟೀಯ ಹೆದ್ದಾರಿಯಲ್ಲಿ ಈ ರೀತಿ ಬ್ರಿಜ್ ಕಂ ಬ್ಯಾರೇಜ್ ಆಗುತ್ತಿರುವುದು ಇದು ದೇಶದಲ್ಲೇ ಮೊದಲು ಆಗಿದೆ.

₹ 36 ಕೋಟಿ ವೆಚ್ಚದ ಈ ಕಾಮಗಾರಿ ಬಹುತೇಕ ಪೂರ್ಣ ಆಗಿದೆ. ಈ ಬ್ಯಾರೇಜ್‌ನಿಂದ ಔರಾದ್ ಹಾಗೂ ಬೀದರ್ ತಾಲ್ಲೂಕಿನ ಅನೇಕ ಗ್ರಾಮಗಳ ರೈತರ ಹೊಲಗಳಿಗೆ ಹಾಗೂ ಬೇಸಿಗೆ ಕುಡಿಯುವ ನೀರಿನ ಸಮಸ್ಯೆಗೂ ಶಾಶ್ವತ ಪರಿಹಾರ ಸಿಗಲಿದೆ ಎಂದು ಖೂಬಾ ಹೇಳಿದರು.

ಈ ಬ್ರಿಜ್ ಕಂ ಬ್ಯಾರೇಜ್ ನದಿಗೆ ಅಡ್ಡಲಾಗಿ 325 ಮೀಟರ್ ಉದ್ದದಲ್ಲಿ ನಿರ್ಮಿಸಲಾಗಿದೆ. ಅಣೆಕಟ್ಟು 6.1 ಮೀಟರ್ ಎತ್ತರವಿದ್ದು, ಮೇಲಿಂದ ಬರುವ ನೀರು ಇಲ್ಲಿ ಸಂಗ್ರಹವಾಗುತ್ತದೆ ಎಂದರು.

ಈಗಾಗಲೇ ಬೀದರ್ -ಔರಾದ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣ ಆಗಿದ್ದು, ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಿದೆ. ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲು ಪ್ರಧಾನಿ ಮೋದಿ ಹಾಗೂ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಸಹಕಾರ ಎಂದೂ ಮರೆಯಲಾಗದು ಎಂದು ಹೇಳಿದರು.

ಬಿಜೆಪಿ ಮುಖಂಡ ಈಶ್ವರಸಿಂಗ್ ಠಾಕೂರ್, ಮಂಡಲ ಅಧ್ಯಕ್ಷ ದೀಪಕ ಗಾದಗಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ಶಿವಪ್ರಕಾಶ, ರಮೇಶ, ರಾಜೇಂದ್ರ, ಸೂರಜಸಿಂಗ್ ಠಾಕೂರ್, ಪ್ರಕಾಶ ಕೋಳಿ, ನಾಗೇಂದ್ರ ಪಾಟೀಲ್, ನಾಗಶೆಟ್ಟಿ, ಶಿವಾನಂದ ಮಡಿವಾಳ ಇದ್ದರು.

prajaprabhat

Recent Posts

ಆಧಾರ್ ಸೀಡಿಂಗ್ ಮಾಡಿಸುವಂತೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸೂಚನೆ.

ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…

1 hour ago

ಪರೀಕ್ಷೆಯ ಫಲಿತಾಂಶ ಕಡಿಮೆ ಬಂದಿದ್ರೆ ‘ಶಾಲೆ’ಗಳ ವಿರುದ್ಧ ಕ್ರಮ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…

1 hour ago

ಯೂರಿಯಾ, ಡಿಎಪಿ ರಸಗೊಬ್ಬರ ಲಭ್ಯ: ಪ್ರಕಾಶ್ ಚೌಹಾಣ್

ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…

2 hours ago

ಅಗ್ನಿವೀರ್ ಸೇನಾ ಭರ್ತಿ: ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ

ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…

2 hours ago

ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ

ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…

2 hours ago

ಒಳಮೀಸಲಾತಿ ತೀರ್ಮಾನ ನಂತರ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ  ಮಾಡಲಾಗುವುದು.

ಬೆಂಗಳೂರು.11.ಆಗಸ್ಟ್.25:- ರಾಜ್ಯದಲ್ಲಿ ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾಲಿಯಿರುವ ಗುಡ್ಡೆಗಳು ಭರ್ತಿ ಮಾಡಲಾಗುವುದು…

2 hours ago