ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ ಪ್ರಸಿದ್ದಿ ಪಡೆದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟವೇರಿ ಶ್ರೀ ಆಂಜನೇಯ ಸ್ಚಾಮಿ ದರ್ಶನ ಪಡೆದರು.
ಅಂಜನಾದ್ರಿ ಪಾದಗಟ್ಟಿಯಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ ನಂತರ ಭಕ್ತಿ ಮತ್ತು ದೃಢ ಸಂಕಲ್ಪದೊಂದಿಗೆ ಕುಟುಂಬ ಸದಸ್ಯರ ಜೊತೆಗೆ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲುಗಳನ್ನು 30 ನಿಮಿಷದಲ್ಲಿ ಏರಿದರು. ನಂತರ ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ರಾಜ್ಯಪಾಲರನ್ನು ಸನ್ಮಾನಿಸಲಾಯಿತು. ನಂತರ ಗೌರವಾನ್ವಿತ ರಾಜ್ಯಪಾಲರು 20 ನಿಮಿಷದಲ್ಲಿ ಬೆಟ್ಟವನ್ನು ಇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್.ಅರಸಿದ್ದಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…