Home » ಲೈವ್ ನ್ಯೂಸ್ » ಭಾಗ್ಯನಗರ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಆಹ್ವಾನ

ಭಾಗ್ಯನಗರ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.13.ಜೂನ್.26: ಭಾಗ್ಯನಗರ ಪಟ್ಟಣ ಪಂಚಾಯತ ವತಿಯಿಂದ 2025-26ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿರುವ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತಿಯ ಲಿಂಗಿಗಳು ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ವರ್ಗದವರು, ಸ್ವಚ್ಚತಾ ಕಾರ್ಮಿಕರು, ಪಿಎಂ-ಸ್ವನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ್ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು, ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು URL: https://pmayurban.gov.in ನಲ್ಲಿ ಸ್ವತಃ ಸಲ್ಲಿಸಬಹುದು.


ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅರ್ಜಿದಾರರು ಆಧಾರ ಕಾರ್ಡ (ಮನೆಯ ಯಜಮಾನಿ ಹಾಗೂ ತಂದೆ ಅಥವಾ ತಾಯಿಯ ಮತ್ತು ಪಡಿತರ ಚೀಟಿಯಲ್ಲಿ ಇರುವಂತೆ ಕುಟುಂಬ ಸದಸ್ಯರ ಆಧಾರ್ ಕಾರ್ಡುಗಳು), ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳು (ಹಕ್ಕುಪತ್ರ, ಕ್ರಯಪತ್ರ, ದಾನಪತ್ರ, ಉಡುಗೋರೆ ಪತ್ರ, ಖಾತಾ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ನಿಗದಿತ ನಮೂನೆ (Annexure-2A/2B/2C) ಯಲ್ಲಿ “Self Undertaking” ಸಲ್ಲಿಸುವುದು ಮತ್ತು ಮೋಬೈಲ್ ಸಂಖ್ಯೆ ಪ್ಯಾನ್ ಕಾರ್ಡ(ಲಭ್ಯವಿದ್ದಲ್ಲಿ ಮಾತ್ರ), ಈ ಎಲ್ಲಾ ದಾಖಲೆಗಳೊಂದಿಗೆ ಕಛೇರಿ ವೇಳೆಯಲ್ಲಿ ಭಾಗ್ಯನಗರ ಪ.ಪಂ ಕಾರ್ಯಾಲಯಕ್ಕೆ ಅರ್ಜಿಗಳನ್ನು ಸಲ್ಲಸಬಹುದು. ಅವಧಿ ಮೀರಿಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪ.ಪಂ ಕಾರ್ಯಾಲಯದ ವಸತಿ ಶಾಖೆಯ ಅಧಿಕಾರಿಗಳನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಭಾಗ್ಯನಗರ ಪಟ್ಟಣ ಪಂಚಾಯತ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology