ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದ್ದು, ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿಯನ್ನು ಆಚರಿಸಬೇಕು.

ಆಗಸ್ಟ್ 27 ರಂದು ಜರುಗುವ ಗಣೇಶ ಚತುರ್ಥಿ ಪ್ರಯುಕ್ತ ನೀರಿನ ಮೂಲಗಳಲ್ಲಿ ಗಣೇಶನ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಉಂಟಾಗುವ ಜಲಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಭಾಗ್ಯನಗರ ಪ.ಪಂಚಾಯತ ವತಿಯಿಂದ ಕೆಲವು ಮಾರ್ಗಸೂಚಿಯನ್ನು ಜಾರಿಗೊಸಲಾಗಿದೆ.

ಮಾರ್ಗಸೂಚಿಗಳು: ರೋಗ ನಿರೋಧಕ ಶಕ್ತಿ ಇರುವ ಚಿಕ್ಕದಾದ ಮಣ್ಣಿನ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡುವುದು. ಬೀದಿಗಳಲ್ಲಿ ಗಣೆಶ ಮೂರ್ತಿಯನ್ನು ಪ್ರತಿಷ್ಠಾಪಿಸು ಪೂರ್ವದಲ್ಲಿ ಪಟ್ಟಣ ಪಂಚಾಯತ ಕಾರ್ಯಾಲಯದ ಅನುಮತಿಯನ್ನು ಪಡೆಯುವುದು. ಕೆರೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗಣೇಶ ಮೂರ್ತಿ ಆರಾಧನೆಗಾಗಿ ಉಪಯೋಗಿಸುವ ವಸ್ತುಗಳನ್ನು (ಹೂವು, ಹಾರ, ವಸ್ತು, ಅಲಂಕಾರ ಸಾಮಗ್ರಿ ಇತ್ಯಾದಿ) ಜೈವಿಕವಾಗಿ ವಿಘಟನೆಯಾಗುವ ಪದಾರ್ಥಗಳನ್ನು ಬಳಸಿ ತಯಾರಿಸಬೇಕು. ಗಣೇಶ ಚತುರ್ಥಿ ಸಂದರ್ಭದಲ್ಲಿ ಪಿ.ಒ.ಪಿ ಗಣೇಶ, ಪ್ಲಾಸ್ಟಿಕ್ ಬಳಕೆ, ಪಟಾಕಿ ಸಿಡಿಸುವುದು ಧ್ವನಿ ವರ್ಧಕಗಳ ಬಳಕೆ ಮತ್ತು ಕಸವನ್ನು ರಸ್ತೆಗೆ ಬಿಸಾಡುವುದು ಮುಂತಾದ ಚಟುವಟಿಕೆಗಳ ಮೇಲೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಸಹ ನಿಷೇಧಿಸಿದೆ. ಮೂರ್ತಿಗಳು ವಿಸರ್ಜನೆಯಾದ 24 ಗಂಟೆಗಳ ಒಳಗೆ (ಬಾವಿ, ಹೊಂಡದ ಹತ್ತಿರ) ಸಾಮಗ್ರಿಗಳನ್ನು ಬಿಟ್ಟು ಹೋಗಬಾರದು. ಮೂರ್ತಿ ವಿಸರ್ಜನೆಯ ಸ್ಥಳಗಳಲ್ಲಿ ಘನತ್ಯಾಜ್ಯ ವಸ್ತುಗಳನ್ನು ಸುಡುವುದಕ್ಕೆ ನಿಷೇಧಿಸಲಾಗಿದೆ.

ಹಬ್ಬದ ದಿನಗಳಲ್ಲಿ ಸಂಚಾರಿ ವಿಸರ್ಜಿಸುವ ತೊಟ್ಟಿಗಳನ್ನು ನಿರ್ದಿಷ್ಟವಾದ ಸ್ಥಳಗಳಲ್ಲಿ ನಿಲುಗಡೆ ವ್ಯವಸ್ಥೆಯನ್ನು ಮಾಡಲಾಗಿದೆ ಈ ವ್ಯವಸ್ಥೆಯ ಸದುಪಯೋಗವನ್ನು ಪಡೆಯುವುದು. ಸಾಧ್ಯವಾದಷ್ಟು ಅರಶಿಣ/ಜೇಡಿ ಮಣ್ಣಿನಿಂದ ತಯಾರಿಸಿದ ಚಿಕ್ಕದಾದ ಮತ್ತು ಬಣ್ಣ ರಹಿತ ಮೂರ್ತಿಗಳನ್ನು ಪೂಜಿಸುವುದು ಮತ್ತು ವಿಸರ್ಜಿಸುವ ನಿರ್ದಿಷ್ಟ ಪಡಿಸಿರುವ ಸಂಚಾರಿ ಸ್ಥಳದಲ್ಲಿ ವಿಸರ್ಜಿಸುವುದು.

ಬಣ್ಣ ಇರುವ ಗಣೇಶನ ಮೂರ್ತಿಗಳನ್ನೇ ಪೂಜಿಸುವುದಾದರೆ ನೀರಿನಲ್ಲಿ ಕರಗುವ ಬಣ್ಣಗಳು ಮತ್ತು ವಿಷಯುಕ್ತವಲ್ಲದ ನೈಸರ್ಗಿಕ ಬಣ್ಣಗಳನ್ನು ಉಪಯೋಗಿಸಿ ತಯಾರಿಸಿದ ಮೂರ್ತಿಗಳನ್ನು ಬಳಸಿ ಜಲ ಮೂಲಗಳಿಗೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ಸಾರ್ವಜನಿಕರು ಸಹಕರಿಸುವಂತೆ ಭಾಗ್ಯನಗರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುರೇಶ ಬಬಲಾದ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

2 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

2 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

3 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

3 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

3 hours ago

ರಾಯಚೂರ ಜಿಲ್ಲೆಯಲ್ಲಿ ಯೂರಿಯಾ’ ಡಿಎಪಿ ರಸಗೊಬ್ಬರ ಲಭ್ಯ

ರಾಯಚೂರು.05.ಆಗಸ್ಟ್.25: ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಹಂತ ಹಂತವಾಗಿ ವಿವಿಧ…

3 hours ago