ಭಾರತೀಯ ರಿಸರ್ವ್ ಬ್ಯಾಂಕ್‍ಗಳು ಮತ್ತುನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.18.ಫೆಬ್ರುವರಿ.25:-ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫೈನಾನ್ಸ್‍ಗಳು, ಲೇವಾದೇವಿ ವ್ಯಾಪಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‍ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಮತ್ತು ಜಿಲ್ಲೆಯ ಎಲ್ಲಾ ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಮೈಕ್ರೋ ಫೈನಾನ್ಸ್‍ಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಿಗಳನ್ನು ಪರಿಶೀಲನೆಯನ್ನು ಮಾಡಿ, ಅವರ ಆದಾಯದ ಶೇ. 50 ರಷ್ಟು ಮಾತ್ರ ಸಾಲ ನೀಡಬೇಕು, ಆದರೆ, ಅವರು ಸಾಲ ತೆದುಕೊಳ್ಳುವ ಸಾಮಥ್ರ್ಯ ನೋಡದೇ ಸಾಲವನ್ನು ನೀಡಿರುವ ಬಗ್ಗೆ ಕಂಡುಬರುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು. ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರು ಇಬ್ಬರೂ ಸಹ ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದರು.


ಆರ್.ಬಿ.ಐ ಮಾರ್ಗಸೂಚಿಯ ಪ್ರಕಾರ ಮೈಕ್ರೋ ಫೈನಾನ್ಸ್‍ಗಳು ರೂ. 3 ಲಕ್ಷದವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ಮರುಪಾವತಿಯನ್ನು ಕಾನೂನಿನ ಅನ್ವಯ ಕ್ರಮಗಳನ್ನು ಕೈಗೊಳ್ಳಬೇಕು, ಕಾನೂನನ್ನು ಉಲ್ಲಂಘಿಸಿ, ದೌರ್ಜನ್ಯ, ಕೆಟ್ಟ ಪದಗಳಲ್ಲಿ ಬೈಯುವುದು, ದಬ್ಬಾಳಿಕೆ ಕಿರುಕುಳ ನೀಡುವುದ ಮಾಡಿದ್ದಲ್ಲಿ ಅಂತಹವರ ವಿರುದ್ಧ ಪೆÇೀಲೀಸ್‍ನವರು ಪ್ರಕರಣ ದಾಖಲಿಸಿಕೊಳ್ಳಲು ಅವಕಾಶವಿದೆ ಎಂದು ಎಚ್ಚರಿಸಿದರು.


ಜಿಲ್ಲೆಯ ಎಲ್ಲಾ ಮೈಕ್ರೋ ಫೈನಾನ್ಸ್ ಸಾಲದ ವಿವರ ಬಗ್ಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ಸುಮಾರು ರೂ. 1193 ಕೋಟಿ ಸಾಲ 1.79 ಸಾವಿರ ಜನರಿಗೆ ಸಾಲ ವಿತರಣೆ ಮಾಡಲಾಗಿದೆ ಎಂದು  MFIN-STATE CO ORDINATOR ಮಂಜುನಾಥ ಎಸ್. ಮಾಹಿತಿ ನೀಡಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಮಾತನಾಡಿ, ಮೈಕ್ರೋ ಫೈನಾನ್ಸ್‍ಗಳಲ್ಲಿ ತೆಗೆದುಕೊಳ್ಳುವ, ವ್ಯವಹಾರಗಳು ಶಾಂತಿಯುತವಾಗಿ ಆಗಬೇಕು.

ಸಾಲ ವಸೂಲಾತಿಗಾಗಿ ಫೈನಾನ್ಸ್ ಕಂಪನಿಗಳು ಬೆಳಿಗ್ಗೆ 9 ಕ್ಕೂ ಮುನ್ನ ಸಂಜೆ 5 ರನಂತರ ಸಾಲಗಾರರ ಮನೆಗೆ ಹೋಗಬಾರದು ಹಾಗೂ ಯವುದೇ ರೀತಿಯ ದೌರ್ಜನ್ಯಗಳನ್ನು ನಡೆಸಬಾರದು. ಒಂದೊಮ್ಮೆ ಉಲ್ಲಂಘಿಸಿದ್ದಲ್ಲಿ ಅಂತವರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.


ಈ ಸಭೆಯಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಮತ್ತು ಜಿಲ್ಲೆಯ ಎಲ್ಲಾ ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

7 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

16 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

21 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

21 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

1 day ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago