ರೈಲ್ವೆಯಲ್ಲಿ ಅಸಿಸ್ಟಂಟ್ ಲೋಕೋ ಪೈಲಟ್ 9970 ಹುದ್ದೆಗೆ ಅರ್ಜಿ ಆಹ್ವಾನ.!

ಹೊಸ ದೆಹಲಿ.21.ಏಪ್ರಿಲ್.25:- ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (RRB) RAILWAY RECRUITMENT BOARD ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಅಸಿಸ್ಟಂಟ್ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಿದೆ.

RRB Assistant Loco Pilot ALP Recruitment 2025 : Details of Vacancies
ಹುದ್ದೆ : ಅಸಿಸ್ಟಂಟ್ ಲೋಕೋ ಪೈಲಟ್ (ALP)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 9970 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಎಸ್.ಎಸ್.ಎಲ್.ಸಿ ಜೊತೆಗೆ ಫಿಟ್ಟರ್, ಇಲೆಕ್ಟ್ರೀಷಿಯನ್, ಇನ್ಟ್ರುಮೆಂಟ್ ಮೆಕ್ಯಾನಿಕ್, ಮಿಲ್ ವ್ರೈಟ್, ಮೆಂಟೆನೆನ್ಸ್ ಮೆಕ್ಯಾನಿಕ್, ಮೆಕ್ಯಾನಿಕ್ (ರೇಡಿಯೋ & ಟಿವಿ), ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಮೆಕ್ಯಾನಿಕ್ (ಮೋಟಾರ್ ವೆಹಿಕಲ್), ವಯರ್ ಮ್ಯಾನ್, ಟ್ರ್ಯಾಕ್ಟರ್ ಮೆಕ್ಯಾನಿಕ್, ಆರ್ಮೇಚರ್ & ಕಾಯಿಲ್ ವಿಂಡರ್, ಮೆಕ್ಯಾನಿಕ್ (ಡಿಸೇಲ್), ಹೀಟ್ ಇಂಜಿನ್, ಟರ್ನರ್, ಮಶಿನಿಸ್ಟ್, ರೆಫ್ರಿಜಿರೇಷನ್ & ಏರ್ ಕಂಡೀಷನಿಂಗ್ ಟ್ರೇಡಗಳಲ್ಲಿ ಐಟಿಐ ಅಥವಾ ಎಸ್.ಎಸ್.ಎಲ್.ಸಿ ಜೊತೆಗೆ ಮೇಲಿನ ಟ್ರೇಡಗಳಲ್ಲಿ ಅಪ್ರೆಂಟಿಸಶಿಪ್ ಅಥವಾ ಎಸ್.ಎಸ್.ಎಲ್.ಸಿ ಜೊತೆಗೆ ಡಿಪ್ಲೊಮಾ ಇನ್ ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಆಟೋಮೊಬೈಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ :

ಬೆಂಗಳೂರು ಮೆಟ್ರೋದಲ್ಲಿ ನೇಮಕಾತಿ 2025

ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :


• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕಂಪ್ಯೂಟರ್ ಬೇಸ್ಡ್‌ ಆಪ್ಟಿಟ್ಯೂಡ್ ಟೆಸ್ಟ್‌, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.


ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.


ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.


ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.


ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).


ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳೆ, ಟ್ರ್ಯಾನ್ಸ್ಜೆಂಡರ್,

ಅಲ್ಪಸಂಖ್ಯಾತ – ರೂ. 250


ಉಳಿದ ಅಭ್ಯರ್ಥಿಗಳು – ರೂ. 500

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :


ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 12, 2025


ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 11, 2025


ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 13, 2025


ಅರ್ಜಿ ತಿದ್ದುಪಡಿ ಮಾಡುವ ದಿನಾಂಕ : ಮೇ 14, 2025 ರಿಂದ ಮೇ 23, 2025 ರವರೆಗೆ

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

4 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

4 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

4 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

4 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

4 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

5 hours ago