ಬೆಂಗಳೂರು.11.ಆಗಸ್ಟ್.25:- ಪೂರ್ವ ರೈಲ್ವೆಯಲ್ಲಿ 3,115 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ರಿಂದ ಸೆಪ್ಟೆಂಬರ್ 13, 2025 ಕೊನೆಯ ದಿನಾಂಕವಾಗಿದೆ. ನೀವು ಎಸ್ಸೆಸ್ಸೆಲ್ಸಿ, ಐಟಿ ಮುಗಿಸಿದ್ದೀರಾ? ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗಿಲ್ಲಿ ಸಿಹಿ ಸುದ್ದಿ ಇದೆ. ಪೂರ್ವ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 3,115 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ ಇಲಾಖೆ
ಒಟ್ಟು ಹುದ್ದೆಗಳು: 3,115
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಕೆಲವು ಹುದ್ದೆಗಳಿಗೆ ಐಟಿಐ ಪ್ರಮಾಣಪತ್ರವೂ ಅಗತ್ಯವಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 13, 2025 ಆಗಿದೆ.
ಫಿಟ್ಟರ್, ವೆಲ್ಡರ್, ಮೆಕ್ಯಾನಿಕ್, ಬಡಗಿ, ಟರ್ನರ್, ಎಲೆಕ್ಟ್ರಿಶಿಯನ್, ವೈರ್ ಮ್ಯಾನ್, ಲೈನ್ ಮ್ಯಾನ್ ಸೇರಿ ಹಲವು ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಹಾಗೂ ಐಟಿಐ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 24 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿಯವರಿಗೆ ಐದು ವರ್ಷ ಹಾಗೂ ಜನರಲ್, ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಉಳಿದವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಮೆರಿಟ್ ಲಿಸ್ಟ್ ಬಿಡುಗಡೆ ಮಾಡುವ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ, ಪೂರ್ವ ರೈಲ್ವೆಯ ಅಧಿಕೃತ ವೆಬ್ಸೈಟ್ http://www.rrcer.org ಗೆ ಭೇಟಿ ನೀಡಿ, ಎಂದು ನ್ಯೂಸ್ ಫಸ್ಟ್ ಕನ್ನಡ ಹೇಳಿದೆ.