ಭಾರತೀಯ ಸಂಸ್ಕೃತಿ ಉತ್ಸವ: ಬಸವ ರಥಕ್ಕೆ ಚಾಲನೆ ನೀಡಲಾಯಿತು.!

ಬೀದರ.21.ಜನೆವರಿ.25:- 29ರಿಂದ ಫೆ. 6ರವರೆಗೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆಯಲಿರುವ ಭಾರತೀಯ ಸಂಸ್ಕೃತಿ ಉತ್ಸವದ ಅಂಗವಾಗಿ ನಗರದಲ್ಲಿ ಬಸವ ರಥಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ನಗರದ ಗಣೇಶ ಮೈದಾನದಲ್ಲಿ ಅಲಂಕೃತ ಬಸವ ರಥಕ್ಕೆ ತಡೋಳಾ-ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಜ್ಯೋತಿರ್ಮಯಾನಂದ ಸ್ವಾಮೀಜಿ ಚಾಲನೆ ನೀಡಿದರು.

ಇದಕ್ಕೂ ಮುನ್ನ ನಗರದ ರಾಣಿ ಚನ್ನಮ್ಮ ವೃತ್ತ ಹಾಗೂ ಶಿವನಗರ ವೃತ್ತದಿಂದ ಕಾಲೇಜು ವಿದ್ಯಾರ್ಥಿಗಳು ಏಕಕಾಲಕ್ಕೆ ಜಾಥಾದಲ್ಲಿ ಗಣೇಶ ಮೈದಾನಕ್ಕೆ ಬಂದು ಸೇರಿದರು. ಅಲ್ಲಿ ರಥಕ್ಕೆ ಚಾಲನೆ ನೀಡಲಾಯಿತು.

ಬಳಿಕ ಮಾತನಾಡಿದ ವಿಕಾಸ ಅಕಾಡೆಮಿಯ ಜಿಲ್ಲಾ ಸಂಯೋಜಕ ರೇವಣಸಿದ್ದಪ್ಪ ಜಲಾದೆ,’ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಏಳೂ ಜಿಲ್ಲೆಗಳಲ್ಲಿ ಅಲ್ಲಿನ ಮಹಾತ್ಮರ ಹೆಸರುಗಳಲ್ಲಿ ರಥ ಸಂಚರಿಸಲಿವೆ. ಬಸವಣ್ಣನವರ ಕರ್ಮಭೂಮಿ ಇದಾಗಿರುವುದರಿಂದ ಅವರ ಹೆಸರಿನಲ್ಲಿ ಬೀದರ್‌ನಲ್ಲಿ ಬಸವ ರಥಕ್ಕೆ ಚಾಲನೆ ನೀಡಲಾಗಿದೆ’ ಎಂದು ಹೇಳಿದರು.

‘ಜಿಲ್ಲೆಯ ಕಮಲನಗರ, ಔರಾದ್‌, ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್‌, ಚಿಟಗು‌ಪ್ಪ ತಾಲ್ಲೂಕಿನಲ್ಲಿ ಸಂಚರಿಸಿ ಬಳಿಕ ಕಲಬುರಗಿಗೆ ರಥ ಮುಖ ಮಾಡಲಿದೆ. ಕೆಲ ಜಿಲ್ಲೆಗಳ ರಥಗಳು ಸೇಡಂ ತಲುಪಿದರೆ, ಕೆಲವು ಕಲಬುರಗಿ ತಲುಪಲಿವೆ. ಅಲ್ಲಿ ನಡೆಯಲಿರುವ ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ತೆರಳಲಿವೆ’ ಎಂದು ಹೇಳಿದರು.

‘ಜ.29ರಿಂದ ಫೆ. 6ರವರೆಗೆ ಸೇಡಂನಲ್ಲಿ ಬಸವರಾಜ ಪಾಟೀಲ ಸೇಡಂ ಅವರ ನೇತೃತ್ವದಲ್ಲಿ ಭಾರತೀಯ ಸಂಸ್ಕೃತಿ ಉತ್ಸವ ಜರುಗಲಿದೆ. ದೇಶದ ವಿವಿಧ ಭಾಗದ ಮಠಾಧೀಶರು, ಪ್ರಗತಿಪರ ರೈತರು, ಕ್ರೀಡಾಪಟುಗಳು, ವಿಜ್ಞಾನಿಗಳು, ಸಂಶೋಧಕರು, ರಾಜಕಾರಣಿಗಳು ಪಾಲ್ಗೊಳ್ಳುವರು. ಇದು ದಕ್ಷಿಣ ಭಾರತದ ಕುಂಭ ಮೇಳ’ ಎಂದರು.

ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಫೌಂಡೇಶನ್‌ ಅಧ್ಯಕ್ಷ ಶಿವಶರಣಪ್ಪ ವಾಲಿ, ಕರ್ನಲ್‌ ಶರಣಪ್ಪ ಸಿಕೇನಪೂರೆ, ಪ್ರಗತಿಪರ ರೈತ ಮಹಾದೇವ ನಾಗೂರೆ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

2 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

2 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

3 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

3 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

4 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

14 hours ago